ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಧಾರವಾಡ, ಮಂಡ್ಯದಲ್ಲಿ (Dharawad news, Mandya news) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಗಾಂಧಿನಗರದ ಬಂಡಾವಣೆಯಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮಂಡ್ಯದಲ್ಲೂ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
9 ರಾಜ್ಯಗಳಲ್ಲಿ ಎನ್ಐಎ ದಾಳಿ
ನವದೆಹಲಿ: ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಬೆಳ್ಳಂ ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ(NIA Raid) ಅಧಿಕಾರಿಗಳು ದಾಳಿ ಭರ್ಜರಿ ರೇಡ್ ನಡೆಸಿದೆ. ಅಲ್ ಖೈದಾ ಉಗ್ರ ಸಂಘಟನೆಯ ಜೊತೆಗೆ ನಂಟು ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಈ ಕುರಿತು ಸ್ವತಃ ಎನ್ಐಎ ಇಂಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಮಾಡಿದ್ದು, ಭಾರತದಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಜೊತೆಗೆ ಅಲ್ ಖೈದಾ ನಂಟು ಹಿನ್ನಲೆಯಲ್ಲಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಪ್ರದೇಶಗಳ ಮೇಲೆ ಎನ್ಐಎ ಏಕಕಾಲಕ್ಕೆ ದಾಳಿ ನಡೆಸಿದೆ. ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.
ಯಾವ್ಯಾವ ರಾಜ್ಯಗಳಲ್ಲಿ ರೇಡ್?
ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ, ಅಸ್ಸಾಂ ರಾಜ್ಯ ಸೇರಿದಂತೆ 9 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಳೆ ಹಾಕಿದ್ದಾರೆ. ಎನ್ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡರು. 2023ರಲ್ಲಿ ಪ್ರಕರಣದ ತನಿಖೆ ನಡೆಸಿ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದ ಸಂಬಂಧ ಮುಂದುವರೆದ ತನಿಖೆಯ ಭಾಗವಾಗಿ ಎನ್ಐಎ ದಾಳಿ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ: CM Siddaramaiah: ಲೋಕಾಯುಕ್ತ ಕಚೇರಿಗೆ ಖಾಸಗಿ ಕಾರಿನಲ್ಲಿ ತೆರಳಿದ ಸಿಎಂ, ವಿಚಾರಣೆಯಲ್ಲಿ ಏನಾಯ್ತು?