Friday, 22nd November 2024

MUDA Case: ಮುಡಾ ತನಿಖೆ; ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ

BPL Cards

ಬೆಂಗಳೂರು: ಮುಡಾ ಹಗರಣಕ್ಕೆ (MUDA Case, MUDA scam) ಸಂಬಂಧಿಸಿದಂತೆ ಹೈಕೋರ್ಟ್​ (Karnataka high court) ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನವೆಂಬರ್‌ 23ರಂದು ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ, ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್​ ವಿಭಾಗೀಯ ಪೀಠ ನಿಗದಿಪಡಿಸಿದೆ.

ಡಿಸೆಂಬರ್‌ 24ರ ಒಳಗೆ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ನಿರ್ದೇಶಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.

ಹಿರಿಯ ವಕೀಲ ಡಾ. ಅಭಿಷೇಕ ಮನು ಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠದ ಮುಂದೆ ಮೇಲ್ಮನವಿಯನ್ನು ಶುಕ್ರವಾರ ಅಥವಾ ಶನಿವಾರ ವಿಚಾರಣೆಗೆ ಪರಿಗಣಿಸಬೇಕು ಎಂದು ಇಂದು ಉಲ್ಲೇಖಿಸಿದರು.