Friday, 15th November 2024

PSI Exam: ಪಿಎಸ್‌ಐ ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್‌

PSI Exam

ಬೆಂಗಳೂರು: 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ (PSI Exam) ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಅ.3ರಂದು ನಡೆದಿದ್ದ ಪಿಎಎಸ್‌ಐ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ನ.6ರಂದ ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಇದೀಗ ಅಂತಿಮ ಅಂಕಪಟ್ಟಿ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ನಿಗದಿತ ದಿನಾಂಕದೊಳಗೆ ಪತ್ರಿಕೆ-1ಕ್ಕೆ 313 ಹಾಗೂ ಪತ್ರಿಕೆ-2 ಕ್ಕೆ 219 ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಪತ್ರಿಕೆ-1ರ 1ನೇ ಮೌಲ್ಯಮಾಪನದ ಅಂಕಗಳು, 2ನೇ ಮೌಲ್ಯಮಾಪನದ ಅಂಕಗಳು ಮತ್ತು 3ನೇ ಮೌಲ್ಯಮಾಪನದ ಅಂಕಗಳು (1ನೇ & 2ನೇ ಮೌಲ್ಯಮಾಪನದಲ್ಲಿ 8 ಅಥವಾ 8 ಕ್ಕಿಂತ ಹೆಚ್ಚಿನ ಅಂಕಗಳ ವ್ಯತ್ಯಾಸವಿದ್ದ ಪತ್ರಿಕೆಗಳನ್ನು ಮಾತ್ರ 3ನೇ ಮೌಲ್ಯಮಾಪನ ಮಾಡಲಾಗಿದೆ. ಇವುಗಳನ್ನು ಮತ್ತೊಮ್ಮೆ ಪರಿಶೀಲಿಸಿದ್ದು (ಮರು ಏಣಿಕೆ), ಈಗಾಗಲೇ ಈ ವಿದ್ಯಾರ್ಥಿಗಳು ಪಡೆದಿರುವುದಾಗಿ ಪ್ರಕಟಿಸಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಆದ್ದರಿಂದ ಇವರ ಆಕ್ಷೇಪಣೆಗಳನ್ನು ಪುರಸ್ಕರಿಸಲು ಅವಕಾಶವಿರುವುದಿಲ್ಲವೆಂದು ತೀರ್ಮಾನಿಸಲಾಯಿತು ಎಂದು ತಿಳಿಸಿದೆ.

ಪತ್ರಿಕೆ-2 ರ ಒ.ಎಮ್.ಆರ್ ಉತ್ತರ ಪತ್ರಿಕೆಯು ಅಂತಿಮ ಕೀ ಉತ್ತರಗಳೊಂದಿಗೆ ಮೌಲ್ಯಮಾಪನವಾಗಿರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿದ್ದು, ಈಗಾಗಲೇ ಈ ವಿದ್ಯಾರ್ಥಿಗಳು ಪಡೆದಿರುವುದಾಗಿ ಪ್ರಕಟಿಸಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರುವುದಿಲ್ಲ. ಆದ್ದರಿಂದ ಇವರ ಆಕ್ಷೇಪಣೆಗಳನ್ನು ಪುರಸ್ಕರಿಸಲು ಅವಕಾಶವಿರುವುದಿಲ್ಲವೆಂದು ತೀರ್ಮಾನಿಸಲಾಗಿದೆ. ಅಭ್ಯರ್ಥಿಗಳು ಗಳಿಸಿದ ಅಂತಿಮ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ಸಂಬಂಧಪಟ್ಟ ಸಂಸ್ಥೆಯವರು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಿದ್ದಾರೆ ಎಂದು ಕೆಇಎ ತಿಳಿಸಿದೆ.

ಪಿಎಸ್‌ಐ ಪರೀಕ್ಷೆ ಅಂತಿಮ ಫಲಿತಾಂಶಕ್ಕೆ ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/PSIREC2024 ಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ | Sanjay Chakravarthi: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಖ್ಯಾತ ಗಾಯಕ ಅರೆಸ್ಟ್‌