ಬೆಂಗಳೂರು: ನ.16ರಂದು ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನ.17ರಂದು ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ನ.18ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರಾದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ನ.19ರಿಂದ 21ರವರೆಗೆ ರಾಜ್ಯದಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.
ನ.17ರ ಬೆಳಗ್ಗೆ ವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ.