ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ (Actor Darshan) ಹೈಕೋರ್ಟ್‌ನಿಂದ (Karnataka high court) ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ (Supreme court) ಮೇಲ್ಮನವಿ ಸಲ್ಲಿಸಲು ಸರಕಾರ ಅನುಮತಿ ನೀಡಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಯುತ್ತಿದೆ ಎಂದು ತಿಳಿಸಿದರು.
ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಜಾಮೀನು ನೀಡುವಂತೆ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಬಳಿಕ ಜೈಲಿನಿಂದ ದರ್ಶನ್ ಬಿಡುಗಡೆಯಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನ ಕಳೆದರೂ ಸರ್ಜರಿಗೆ ದಿನಾಂಕ ನಿಗದಿಯಾಗಿಲ್ಲ. ಹೀಗಾಗಿ ದರ್ಶನ್ ಅವರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರಕಾರದ ಅನುಮತಿಯ ಅಗತ್ಯವಿದ್ದು, ಇತ್ತೀಚೆಗೆ ಆಯುಕ್ತರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿದ್ದರು.
ಇದನ್ನೂ ಓದಿ: Darshan: ಆರೋಪಿ ದರ್ಶನ್‌ಗೆ ಸರ್ಜಿಕಲ್ ಚೇರ್