ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ (ಡಿ.1) ಎಲ್ಲ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕಾಲೇಜುಗಳಿಗೆ ಸೂಚನೆ ನೀಡಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಎಲ್ಲ ಸಂಯೋಜಿತ ವೈದ್ಯಕೀಯ ಕಾಲೇಜುಗಳನ್ನು ಡಿ.1 ರ ಮಂಗಳವಾರ ಪುನಾ ರಂಭಗೊಳಿಸಿ ಪ್ರಾಯೋಗಿಕ ತರಗತಿಗಳನ್ನು ನಡೆಸುವ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆಯನ್ನು ಆನ್ ಲೈನ್ ಶಿಕ್ಷಣ ಮತ್ತು ಭೌತಿಕ ತರಗತಿ ಹಾಜರಾತಿ ಎರಡೂ ರೀತಿಯಲ್ಲೂ ನಡೆಸಬಹುದು ಎಂದು ತಿಳಿಸಿದೆ.
ಪದವಿ ಕಾಲೇಜುಗಳ ಮಾದರಿಯಲ್ಲೇ ವಿದ್ಯಾರ್ಥಿಗಳು, ಪ್ರಾಧ್ಯಪಕರು ಮತ್ತು ಇತರ ಸಿಬ್ಬಂದಿ ಕಾಲೇಜಿಗೆ ಬರುವ ಮುನ್ನ ಕಡ್ಡಾಯವಾಗಿ ಕರೊನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿಯೊಂದಿಗೆ ಹಾಜರಾಗಬೇಕು.