Saturday, 16th November 2024

Ration Card: ಎಪಿಎಲ್‌ ಕಾರ್ಡ್‌ಗಳ ರದ್ದತಿಗೆ ನಿರ್ದೇಶನ ನೀಡಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

Ration Card

ಬೆಂಗಳೂರು: ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು (Ration Card) ರದ್ದುಗೊಳಿಸಿಲ್ಲ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡುಗಳು ರದ್ದಾಗಿವೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು (APL Card) ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Congress Guarantee: ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ತುದಿಗಾಲಲ್ಲಿ ನಿಂತ ಸಿಎಂ: ಛಲವಾದಿ ನಾರಾಯಣಸ್ವಾಮಿ ಟೀಕೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಸಾರಿಗೆ ನಿಗಮಗಳಲ್ಲಿ ಶೀಘ್ರವೇ 9 ಸಾವಿರ ಹುದ್ದೆ ಭರ್ತಿ

Transport Department

ಹುಬ್ಬಳ್ಳಿ: ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕಳೆದ ಏಳೆಂಟು ವರ್ಷಗಳಿಂದ ಸಾರಿಗೆ ನಿಗಮಗಳಲ್ಲಿ (Transport Department) ನೇಮಕಾತಿಯೇ ಆಗಿರಲಿಲ್ಲ. ಹೀಗಾಗಿ 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga reddy) ಅವರು ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ.

ನಗರದ ಗೋಕುಲರಸ್ತೆಯ ಎಚ್.ಡಿ.ಬಿ.ಆ‌ರ್. ಟಿ.ಎಸ್. ಘಟಕದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಸಾರಿಗೆ ನಿಗಮಗಳಲ್ಲಿ 1000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಆ ಪ್ರಕ್ರಿಯೆ ಪೂರ್ಣವಾಗಲಿದೆ. ಇನ್ನು ಕಳೆದ ಏಳೆಂಟು ವರ್ಷಗಳಿಂದ ಸಾರಿಗೆ ನಿಗಮಗಳಲ್ಲಿ ನೇಮಕಾತಿಯೇ ಆಗಿರಲಿಲ್ಲ. ಹೀಗಾಗಿ 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ 1 ಕೋಟಿ ವಿಮೆ ವಿತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಯುಪಿಐ ಮೂಲಕ ಪ್ರಯಾಣಿಕರು ಟಿಕೆಟ್ ಪಡೆಯಬಹುದಾಗಿದೆ. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾರಿಗೆ ಸಂಸ್ಥೆಯಲ್ಲಿ ಅಭಿವೃದ್ಧಿ ಕಾಣುತ್ತಿದೆ. ಬಸ್ ಖರೀದಿ, ನೇಮಕಾತಿ, ಸಕಾಲಕ್ಕೆ ವೇತನ ದೊರೆಯುವಂತಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ತಿಂಗಳಿಗೆ ಸರಿಯಾಗಿ ವೇತನ ಸಿಗುತ್ತಿರಲಿಲ್ಲ. ವೇತನ ಪರಿಷ್ಕರಣೆ ಹಿಂಬಾಕಿ ಬಾಕಿಯಿದ್ದು, ಸಂಸ್ಥೆಗಳ ಸಾಲ ಹೆಚ್ಚಾಗಿರುವುದರಿಂದ ಸಮಸ್ಯೆಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್ ಒದಗಿಸಲಾಗಿದೆ. ಡಿಸೆಂಬ‌ರ್ ಅಂತ್ಯದೊಳಗೆ ಬಸ್‌ ಬರಲಿವೆ. ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿ ಈ 5 ಲಕ್ಷದ ಬದಲಾಗಿ ಈ 10 ಲಕ್ಷ ನೀಡಬೇಕು ಎಂದು ತಿಳಿಸಿದರು.