ಬೆಂಗಳೂರು: ಖಾಸಗಿ ಬೀಚ್ ರೆಸಾರ್ಟ್ನ ಸ್ವಿಮ್ಮಿಂಗ್ ಪೂಲ್ನಲ್ಲಿ ಮೈಸೂರು ಮೂಲದ ಮೂವರು ಯುವತಿಯರು ಮುಳುಗಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿ (Mangalore News) ನಡೆದಿದೆ. ಸ್ವಿಮ್ಮಿಂಗ್ ಪೂಲ್ನಲ್ಲಿ ಒಬ್ಬ ಯುವತಿ ಮುಳುಗುತ್ತಿದ್ದಾಗ, ಆಕೆಯನ್ನು ಕಾಪಾಡಲು ಹೋಗಿ ಎಲ್ಲರೂ ಮುಳುಗಿ ದುರಂತ ಸಂಭವಿಸಿದೆ.
ಮೈಸೂರಿನ ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ. ಎಸ್ (20), ವಿಜಯ ನಗರದ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನ. ಎನ್(21) ಮೃತರು. ಯುವತಿಯರು ಶನಿವಾರ ಬೆಳಗ್ಗೆ ಬೀಚ್ ರೆಸಾರ್ಟ್ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು ಬೆಳಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ನಲ್ಲಿ ಆಟವಾಡುತ್ತಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಈ ವೇಳೆ ಆಯ ತಪ್ಪಿ ಓರ್ವ ಯುವತಿ ಮುಳುಗಿದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲಿಸಿ, ಇವತ್ತು ಬೆಳಗ್ಗೆ 10 ಗಂಟೆಗೆ ಮೂವರು ಯುವತಿಯರು ಈಜುಕೊಳಕ್ಕೆ ಇಳಿದಿದ್ದಾರೆ. ಈಜು ಬಾರದ ಯುವತಿ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಅವಳ ರಕ್ಷಣೆಗೆ ಇನ್ನಿಬ್ಬರು ಹೋಗಿ, ಎಲ್ಲರೂ ಮುಳುಗಿದ್ದಾರೆ. ಮೂವರೂ ಮೈಸೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಫೈನಲ್ ಇಯರ್ ಸ್ಟೂಡೆಂಟ್ಸ್ ಆಗಿದ್ದಾರೆ. ರೆಸಾರ್ಟ್ನಲ್ಲಿ ಲೈಫ್ ಗಾರ್ಡ್ ಯಾರೂ ಇರಲಿಲ್ಲ. ಆಳದ ಬಗ್ಗೆಯೂ ಮಾಹಿತಿ ಫಲಕ ಅಳವಡಿಸಿಲ್ಲ. ಈ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Viral Video: ಹೈ ವೋಲ್ಟೇಜ್ ಟ್ರಾನ್ಸ್ಫಾರ್ಮರ್ ಏರಿ ಮಹಿಳೆಯ ಹೈಡ್ರಾಮಾ! ವಿಡಿಯೊ ಇದೆ
ಬೆಂಗಳೂರಲ್ಲಿ ಹೊತ್ತಿ ಉರಿದ ಕಾರು; ಸುಟ್ಟು ಕರಕಲಾದ ಮಾಲೀಕ!
ಬೆಂಗಳೂರು: ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ (Car catches fire) ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ? ಅಥವಾ ಕಾರಿನ ಮಾಲೀಕ ಆತ್ಮಹತ್ಯೆಗೆ ಯತ್ನಿಸಿರಬಹುದೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನ ಹಿಂಬದಿ ಭಾಗವನ್ನು ನೋಡಿದರೆ ಸ್ಕೋಡಾ ಕಾರು ಎಂಬಂತೆ ಕಂಡುಬರುತ್ತಿದೆ. ಇನ್ನು ಕಾರಿನ ಬಗ್ಗೆಯಾಗಲೀ ಅಥವಾ ಕಾರಿನಲ್ಲಿ ಸುಟ್ಟು ಕರಕಲಾಗಿರುವ ವ್ಯಕ್ತಿಯ ಬಗ್ಗೆಯಾಗಲೀ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಖಾಲಿ ನಿವೇಶನದಲ್ಲಿ ಕಾರಿನಲ್ಲಿ ಕುಳಿತಿದ್ದ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದ ಎಂಬ ಶಂಖೆ ವ್ಯಕ್ತವಾಗಿದೆ.
ಕಾರಿಗೆ ಬೆಂಕಿ ಬಿದ್ದಿರುವ ಮಾಹಿತಿ ತಿಳಿದು ಸ್ಥಳಕ್ಕೆ ಹೋದ ಅಗ್ನಿಶಾಮಕದಳ ಸಿಬ್ಬಂದಿ, ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರ ವೇಳೆಗೆ ಡ್ರೈವರ್ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.
ಈ ಸುದ್ದಿಯನ್ನೂ ಓದಿ | Actor T Thimmaiah: ಹಿರಿಯ ನಟ ಟಿ. ತಿಮ್ಮಯ್ಯ ಹೃದಯಾಘಾತದಿಂದ ನಿಧನ