ಬೆಂಗಳೂರು: ನ.18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಒಳ ಕರ್ನಾಟಕ, ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ. ಇನ್ನು ನ.19ರಿಂದ 23ರವರೆಗೆ ರಾಜ್ಯದಲ್ಲಿ ಒಣ ಹವೆಯಿರಲಿದೆ. ನ.19 ರಿಂದ 23ರವರೆಗೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Mangalore News: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು
ನ.19ರಂದು ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ.