ಬೆಂಗಳೂರು: ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ (Commercial crop) ಒಂದಾಗಿರುವ ಅಡಕೆ (Areca Nut) ಬೆಳೆಗಾರರನ್ನು ಮತ್ತೆ ಕ್ಯಾನ್ಸರ್ನ (cancer) ಹೆಸರಿನಲ್ಲಿ ಬೆದರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (World health organization) ಅಂಗಸಂಸ್ಥೆಯೊಂದು, ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದಾಗಿದೆ ಎಂದು ವರದಿ ಸಲ್ಲಿಸಿದೆ.
ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ. ತಂಬಾಕು ಮಾದರಿಯಲ್ಲಿ ಅಡಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಕೆ ಬೆಳೆಗಾರರಲ್ಲಿ ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಕೆಯ ಕುರಿತು ಮಹತ್ವದ ವರದಿ ಸಲ್ಲಿಸಿದ್ದು, ಅಡಕೆ ಕ್ಯಾನ್ಸರ್ ಕಾರಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದರಲ್ಲಿ ಅಡಕೆ ಬಳಕೆಗೆ ನಿಯಂತ್ರಣ ಹೇರಲು ಶಿಫಾರಸು ಮಾಡಲಾಗಿದೆ. ಅಡಕೆ ಬಳಕೆಯನ್ನು ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್ ತಗ್ಗಿಸಬಹುದೆಂದು ವರದಿ ಸಲ್ಲಿಸಲಾಗಿದೆ. ಅಡಕೆ ಕ್ಯಾನ್ಸರ್ ಕಾರಕವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಕಾನೂನು ಸಮರ ನಡೆಯುತ್ತಿದ್ದು, ಅಡಕೆಯು ಆರೋಗ್ಯದಾಯಕ ಎಂದು ಸಾಬೀತುಪಡಿಸಲಾಗಿದೆ. ಇದರ ನಡುವೆ ಇಂತಹುದೊಂದು ವರದಿ ಸಲ್ಲಿಕೆಯಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆಂಡ್ ಕ್ಯಾನ್ಸರ್ 2024ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತರಾಷ್ಟ್ರೀಯ ಜರ್ನಲ್ ನಲ್ಲಿ ಈ ವರದಿ ಪ್ರಕಟವಾಗಿದೆ.