Monday, 18th November 2024

Narendra Modi: ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ

Modi Brazil Visit

ಬ್ರೆಜಿಲ್:‌ ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ನೈಜೀರಿಯಾ ಭೇಟಿ ಬಳಿಕ ಜಿ20 ನಾಯಕರ ಶೃಂಗಸಭೆಯಲ್ಲಿ(G20 Leaders’ Summit) ಪಾಲ್ಗೊಳ್ಳಲು ಬ್ರೆಜಿಲ್‌(Brazil)ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಇಂದು ಮಂಗಳವಾರ ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ಸ್ವಾಗತ ದೊರೆತಿದೆ.

ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ. ಜಿಲ್ ನ ವೇದ ವಿದ್ವಾಂಸರು ಪ್ರಧಾನಮಂತ್ರಿ ಮೋದಿಯವರ ಮುಂದೆ ವೇದ ಮಂತ್ರಗಳನ್ನು ಪಠಿಸಿದ್ದು ವಿಶೇಷವಾಗಿತ್ತು. ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿನ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ. ಅನಿವಾಸಿ ಭಾರತೀಯರು ‘ಮೋದಿ ಮೋದಿ’ ಘೋಷಣೆಗಳನ್ನು ಕೂಗುತ್ತಾ ಭಾರತೀಯ ಸಂಸ್ಕೃತಿಯಂತೆ ನೃತ್ಯ ಮೂಲಕ ಸ್ವಾಗತಿಸಿದರು.

ಇನ್ನು ನಿನ್ನೆ ನೈಜೀರಿಯಾ ಪ್ರವಾಸದಲ್ಲಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಸರ್ಕಾರವು ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರ ಪ್ರದಾನ ಮಾಡಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದ್ದು, ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು (Bola Ahmed Tinubu) ಪ್ರದಾನ ಮಾಡಿದರು. ಇದರೊಂದಿಗೆ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಈ ಹಿಂದೆ 1969ರಲ್ಲಿ ಇಂಗ್ಲೆಂಡ್‌ನ ರಾಣಿ ಎಲಿಜಬೆತ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಪ್ರಶಸ್ತಿ ಸ್ವೀಕರಿಸಿದ ನಂತರ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ ಅವರು, ಈ ಗೌರವವನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ ಪ್ರದಾನ