ಬೆಂಗಳೂರು: ನೀವು ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಈ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (NIA Recruitment 2024). ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಸೇರಿ ಸುಮಾರು 164 ಹುದ್ದೆಗಳು ಖಾಲಿ ಇದ್ದು, ಪದವಿ, 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನಿಮ್ಮ ಅರ್ಜಿ ಡಿ. 26ರೊಳಗೆ ಕೈಸೇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಇನ್ಸ್ಪೆಕ್ಟರ್ – 55 ಹುದ್ದೆ, ವಿದ್ಯಾರ್ಹತೆ: ಪದವಿ
ಸಬ್ ಇನ್ಸ್ಪೆಕ್ಟರ್ – 64 ಹುದ್ದೆ, ವಿದ್ಯಾರ್ಹತೆ: ಪದವಿ
ಅಸಿಸ್ಟಂಟ್ ಸಬ್ ಇನ್ಸ್ಪೆಕ್ಟರ್ – 40 ಹುದ್ದೆ, ವಿದ್ಯಾರ್ಹತೆ: ಪದವಿ
ಹೆಡ್ ಕಾನ್ಸ್ಟೇಬಲ್ – 5 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ವಯೋಮಿತಿ ಮತ್ತು ಆಯ್ಕೆ ವಿಧಾನ
ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 56 ವರ್ಷ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗ ಸ್ಥಳ: ಭಾರತಾದ್ಯಂತ.
ಮಾಸಿಕ ವೇತನ
ಇನ್ಸ್ಪೆಕ್ಟರ್ – 44,900 ರೂ. – 1,42,400 ರೂ.
ಸಬ್ ಇನ್ಸ್ಪೆಕ್ಟರ್ – 35,400 ರೂ. – 1,12,400 ರೂ.
ಅಸಿಸ್ಟಂಟ್ ಸಬ್ ಇನ್ಸ್ಪೆಕ್ಟರ್ – 29,200 ರೂ. – 92,300 ರೂ.
ಹೆಡ್ ಕಾನ್ಸ್ಟೇಬಲ್ – 25,500 ರೂ. – 81,700 ರೂ. ಮಾಸಿಕ ವೇತನ ದೊರೆಯಲಿದೆ.
NIA Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅಪ್ಲಿಕೇಷನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ (http://nia.gov.in/writereaddata/Portal/Recruitment/196_1_RecruitmentNoticeInspSI.pdf)
- ಅಪ್ಲಿಕೇಷನ್ ಫಾರಂ ಅನ್ನು ಡೌನ್ಲೋಡ್ ಮಾಡಿ.
- ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಅಪ್ಲಿಕೇಷನ್ ಫಾರಂ ಅನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:
SP (Adm), NIA HQ, Opposite CGO Complex, Lodhi Road, New Delhi-110003
ನೀವು ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮತ್ತಿತರ ವಿಧಾನಗಳ ಮೂಲಕ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕೃತ ವೆಬ್ಸೈಟ್ ವಿಳಾಸ: nia.gov.inಕ್ಕೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್ನಲ್ಲಿದೆ 275 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ