ಬೆಂಗಳೂರು: ಮುಂದಿನ 5 ದಿನಗಳ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನ.19ರಂದು ಮಂಗಳವಾರ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ನ. 24ರವರೆಗೆ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಇನ್ನುಳಿದೆಡೆ ಒಣ ಹವೆ ಕಂಡುಬರಲಿದೆ.
ನ.20ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಮುಸುಕಿದ ವಾತಾವರಣ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಈ ಸುದ್ದಿಯನ್ನೂ ಓದಿ | Belagavi News: ನದಿಯಲ್ಲಿ ಮೀನು ಹಿಡಿಯಲು ಹೋಗಿ ತಂದೆ, ಇಬ್ಬರು ಮಕ್ಕಳು ದಾರುಣ ಸಾವು