ನವದೆಹಲಿ: ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ (IND vs AUS) ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ರನ್ ಗಳಿಸುವ ಹಸಿವನ್ನು ಹೊಂದಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವೆಂಬರ್ 22 ರಂದು ಪರ್ತ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಣ ಮೊದಲನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯದ ಮೂಲಕ ಟೆಸ್ಟ್ ಸರಣಿ ಆರಂಭವಾಗಲಿದೆ. ಅಂದ ಹಾಗೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡ ಟೆಸ್ಟ್ ಸರಣಿಯನ್ನು ಗೆಲ್ಲಬೇಕೆಂದರೆ ವಿರಾಟ್ ಕೊಹ್ಲಿ ಫಾರ್ಮ್ ಮರಳುವುದು ತುಂಬಾ ಮುಖ್ಯ.
ಅಂದ ಹಾಗೆ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ತವರು ಟೆಸ್ಟ್ ಸರಣಿಯಲ್ಲಿ ಕೇವಲ 93 ರನ್ಗಳನ್ನು ಕಲೆ ಹಾಕಿದ್ದರು. ಇದರಲ್ಲಿ ಅವರು ಒಂದು ಇನಿಂಗ್ಸ್ನಲ್ಲಿ 70 ರನ್ಗಳನ್ನು ಗಳಿಸಿದ್ದರು. ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯದ ಕಾರಣ ಭಾರತ ತಂಡ ಈ ಸರಣಿಯಲ್ಲಿ 0-3 ಅಂತರದಲ್ಲಿ ವೈಟ್ ವಾಷ್ ಆಘಾತ ಅನಭವಿಸಿತ್ತು.
IND vs AUS: ಆಸೀಸ್ ಮೊದಲ ಟೆಸ್ಟ್ಗೆ ವಿರಾಟ್ ಕೊಹ್ಲಿ ನಾಯಕ
ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್, ಆಸ್ಟ್ರೇಲಿಯಾದಲ್ಲಿ ರನ್ ಗಳಿಸಲು ಮಾಜಿ ನಾಯಕ ಹಸಿವಿನಿಂದ ಕೂಡಿದ್ದಾರೆ ಎಂದು ಹೇಳಿದ್ದಾರೆ. ಅಂದ ಹಾಗೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಸಾಕಷ್ಟು ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ತೋರಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ ಸುನೀಲ್ ಗವಾಸ್ಕರ್, “ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ರನ್ ಗಳಿಸುವ ಹಸಿವಿನಲ್ಲಿದ್ದಾರೆ. ಏಕೆಂದರೆ ಅವರು ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಅದರಲ್ಲಿಯೂ ಅಡಿಲೇಡ್ ಟೆಸ್ಟ್ನ ಪ್ರಥಮ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ 70ಕ್ಕೂ ಹೆಚ್ಚಿನ ರನ್ಗಳನ್ನು ಕಲೆ ಹಾಕಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡ ಕೇವಲ 36 ರನ್ಗಳಿಗೆ ಆಲ್ಔಟ್ ಆಗಿತ್ತು. ಅಡಿಲೇಡ್ನಲ್ಲಿ ವಿರಾಟ್ ಕೊಹ್ಲಿ ನಿಯಮಿತವಾಗಿ ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಮೊದಲನೇ ಟೆಸ್ಟ್ ನಡೆಯುವ ಪರ್ತ್ನಲ್ಲಿಯೂ ಕೊಹ್ಲಿ 2018-19ರ ಸಾಲಿನ ಪ್ರವಾಸದಲ್ಲಿ ಅದ್ಭುತ ಶತಕವನ್ನು ಸಿಡಿಸಿದ್ದರು. ಅದು ಭಯಾನಕ ಶತಕವಾಗಿತ್ತು. ಈ ಕ್ರೀಡಾಂಗಣಗಳಲ್ಲಿ ಉತ್ತಮ ಪ್ರದರ್ಶನ ತೋರಿರುವ ಕಾರಣ, ಇದೀಗ ವಿರಾಟ್ ಕೊಹ್ಲಿ ವಿಶ್ವಾಸದಲ್ಲಿದ್ದಾರೆ. ಇಲ್ಲಿ ಉತ್ತಮ ಆರಂಭ ಪಡೆಯಲು ವಿರಾಟ್ ಕೊಹ್ಲಿಗೆ ಸ್ವಲ್ಪ ಅದೃಷ್ಟ ಬೇಕು. ಅವರು ಒಳ್ಳೆಯ ಆರಂಭ ಪಡೆದರೆ, ದೊಡ್ಡ ಮೊತ್ತವನ್ನು ಕಲೆ ಹಾಕಲಿದ್ದಾರೆ,” ಎಂದು ಭವಿಷ್ಯ ನುಡಿದಿದ್ದಾರೆ.
IND vs AUS: ಆಸ್ಟ್ರೇಲಿಯಾ ಟೆಸ್ಟ್ ಸರಣಿ ಗೆಲ್ಲಲು ಭಾರತಕ್ಕೆ ಉಪಯುಕ್ತ ಸಲಹೆ ನೀಡಿದ ಮೈಕಲ್ ವಾನ್!
2024ರಲ್ಲಿ ವಿರಾಟ್ ಕೊಹ್ಲಿಯ ಅಂಕಿಅಂಶಗಳು
ಪ್ರಸಕ್ತ ವರ್ಷದಲ್ಲಿ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ನಲ್ಲಿದ್ದಾರೆ. ಈ ವರ್ಷ ಆಡಿದ್ದ 6 ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೇವಲ 22ರ ಸರಾಸರಿಯಲ್ಲಿ ಒಂದು ಅರ್ಧಶತಕದೊಂದಿಗೆ ಕೇವಲ 250 ರನ್ಗನ್ನು ಗಳಿಸಿದ್ದಾರೆ. ಆದರೆ, ಆಸ್ಟ್ರೇಲಿಯಾದಲ್ಲಿನ ಅತ್ಯುತ್ತಮ ದಾಖಲೆಯನ್ನು ಹೊಂದಿರುವ ಕಾರಣ ಈ ಸರಣಿಯಲ್ಲಿ ಕೊಹ್ಲಿ ಫಾರ್ಮ್ಗೆ ಮರಳಬಹುದೆಂದು ನಿರೀಕ್ಷೆ ಮಾಡಬಹುದು. ಕಾಂಗರೂ ನಾಡಿನಲ್ಲಿ ಕೊಹ್ಲಿ ಆಡಿರುವ 13 ಪಂದ್ಯಗಳಿಂದ 54.08ರ ಸರಾಸರಿಯಲ್ಲಿ 1352ರನ್ಗಳನ್ನು ಕಲೆ ಹಾಕಿದ್ದಾರೆ.