ಬೆಂಗಳೂರು: ನಗರದ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಯುವತಿ ಸಜೀವ ದಹನವಾಗಿದ್ದಾಳೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ (Fire Accident) ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಬೆಂಕಿಗಾಹುತಿಯಾಗಿದ್ದಾಳೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ಸ್ಕೂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆಲ್ಲಾ ಬೆಂಕಿ ವ್ಯಾಪಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ತೀವ್ರತೆಗೆ ಹಲವಯ ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟ ಭಸ್ಮವಾಗಿದ್ದು, ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ.
#BreakingNews : A fire broke out at an electric vehicle (EV) store on Dr. Rajkumar Road in Rajajinagar's Navrang area. Two fire engines were dispatched to the scene to extinguish the blaze.#Fire #EVshowroom pic.twitter.com/GpmGt9e7aK
— Nithya Mandyam (@Nithya_Mandyam) November 19, 2024
ಈ ಸುದ್ದಿಯನ್ನೂ ಓದಿ | Alisha Abdullah: ಕಿರುಕುಳ ನೀಡಿದ ವ್ಯಕ್ತಿಯ ಹೆಡೆಮುರಿ ಕಟ್ಟಿ ಪೊಲೀಸ್ ಠಾಣೆಗೆ ಎಳೆದೊಯ್ದ ಬಿಜೆಪಿ ನಾಯಕಿ; ವಿಡಿಯೊ ವೈರಲ್
ಕಾಲೇಜು ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗದ್ದಕ್ಕೆ ನೊಂದು ಪಿಯು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಗೆದ್ದಲಹಳ್ಳಿಯ (Bengaluru crime news) ಅಪಾರ್ಟ್ಮೆಂಟ್ವೊಂದರ ಏಳನೇ ಮಹಡಿಯಿಂದ ಜಿಗಿದು ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಕಾಲೇಜಿನ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗದಿದ್ದುದರಿಂದ ಈತ ನೊಂದಿದ್ದ ಎಂದು ಗೊತ್ತಾಗಿದೆ.
ಗೆದ್ದಲಹಳ್ಳಿಯ ನಿವಾಸಿ ಆದೀವ್(16) ಮೃತಪಟ್ಟ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಆದೀವ್ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿ ತಂದೆ ಸಾಫ್ಟ್ವೇರ್ ಎಂಜಿನಿಯರ್ ಹಾಗೂ ತಾಯಿ ಗೃಹಿಣಿ. 15 ವರ್ಷಗಳಿಂದ ಗೆದ್ದಲಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ನೆಲಸಿದ್ದರು. ಕಾಲೇಜಿನಲ್ಲಿ ಇತ್ತೀಚೆಗೆ ಕ್ರಿಕೆಟ್ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡಲಾಗಿತ್ತು. ಆದೀವ್ ತಂಡಕ್ಕೆ ಆಯ್ಕೆ ಆಗಿರಲಿಲ್ಲ ಎನ್ನಲಾಗಿದೆ.
ಇದರಿಂದ ಆದೀವ್ ನೊಂದುಕೊಂಡಿದ್ದ. ಬೇರೆ ಕಾಲೇಜಿಗೆ ಸೇರಿಸುವಂತೆ ಪೋಷಕರ ಬಳಿ ಮನವಿ ಮಾಡಿದ್ದ. ಮುಂದಿನ ವರ್ಷ ಬೇರೆ ಕಾಲೇಜಿಗೆ ಸೇರಿಸುವುದಾಗಿಯೂ ಪೋಷಕರು ಹೇಳಿ ಸಮಾಧಾನಪಡಿಸಿದ್ದರು. ಇದೇ ವಿಚಾರವಾಗಿ ಭಾನುವಾರ ಮಧ್ಯಾಹ್ನ ಮನೆಬಿಟ್ಟು ಹೋಗಿದ್ದ. ಸಂಜೆಯಾದರೂ ಮನೆಗೆ ಬಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಪುತ್ರ ರಾತ್ರಿ ವೇಳೆ ಮನೆಗೆ ಬರಬಹುದು ಎಂದು ಭಾವಿಸಿ ಪೋಷಕರು ಮಲಗಿದ್ದರು. ಬಳಿಕ ಮಧ್ಯರಾತ್ರಿ 1.30ರ ಸುಮಾರಿಗೆ ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ್ದರು. ಆ ಸಮಯದಲ್ಲಿ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಬ್ದ ಕೇಳಿ ಫ್ಲ್ಯಾಟ್ ನಿವಾಸಿಗಳು ಬಂದು ನೋಡಿದಾಗ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.
ಈ ಸುದ್ದಿಯನ್ನೂ ಓದಿ | Viral News: ಹಸೆಮನೆ ಏರಬೇಕಾದವ ಸೇರಿದ್ದು ಮಸನಕ್ಕೆ; ಸಾವಿಗೂ ಮುನ್ನ ಮದುವೆ ಸಂಭ್ರಮದಲ್ಲಿದ್ದ ವರನ ವಿಡಿಯೊ ಫುಲ್ ವೈರಲ್!
ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.