ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಕಡಿಮೆಯಾಗಿದ್ದು, ತೀವ್ರ ಚಳಿ (Winter) ಶುರುವಾಗುತ್ತಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಉಷ್ಣಾಂಶ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ.
ನ. 21ರಿಂದ 25ರವರೆಗೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗಗದ, ಕೊಪ್ಪಳ , ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಬಿಸಿಲು ಮಾಯವಾಗಿ ಚಳಿ ಹೆಚ್ಚಾಗಲಿದೆ.
ಈ ಬಗ್ಗೆ ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ಅವರು, ಮುಂದಿನ 7 ದಿನಗಳವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗಗದ, ಕೊಪ್ಪಳ , ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ. ಹಾಗೆಯೇ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಮುಂದಿನ ವಾರ ಕನಿಷ್ಠ ಉಷ್ಣಾಂಶ 12 ರಿಂದ 14 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 7 ದಿನಗಳಲ್ಲಿ ಗರಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಚಳಿ ಹೆಚ್ಚಾಗಲು ಕಾರಣವೇನು?
ಈ ಬಾರಿಯ ಚಳಿಗಾಲದಲ್ಲಿ ಚಳಿಯು ತೀವ್ರವಾಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಲಾ ನಿನಾ ಸ್ಥಿತಿ ಕಾರಣ. ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಆಗುವ ಸಾಧ್ಯತೆ ಇದೆ. ನೀರಿನ ಮೇಲ್ಮೈ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಆಗುವ ಪರಿಣಾಮವನ್ನು ಲಾ ನಿನಾ ಕಂಡಿಷನ್ ಎನ್ನಲಾಗುತ್ತದೆ. ಲಾ ನಿನಾ ಸ್ಥಿತಿ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಹೊರಹೊಮ್ಮುವ ಸಾಧ್ಯತೆ ಇದ್ದು, ಇದು 2025 ಜನವರಿಯಿಂದ ಮಾರ್ಚ್ವರೆಗೂ ಮುಂದುವರಿಯುವ ಸಾಧ್ಯತೆ ಇದೆ.
ಲಾ ನಿನಾ ಮುಂದುವರಿಯುವುದರಿಂದ ಕರ್ನಾಟಕ ರಾಜ್ಯದಾದ್ಯಂತ ಉಷ್ಣಾಂಶ ತಗ್ಗುವ ಸಾಧ್ಯತೆ ಇದೆ. ಅಲ್ಲದೆ ಉತ್ತರ ಭಾರತದಿಂದ ಒಣ ಹಾಗೂ ತಂಪು ಹವೆ ಬೀಸುವುದರಿಂದ ಕನಿಷ್ಠ ಉಷ್ಣಾಂಶವೂ ಕಡಿಮೆ ಆಗಬಹುದು ಎಂದು ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು, ಉತ್ತರ ಕರ್ನಾಟಕಕ್ಕೆ ಅಲರ್ಟ್
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ ಕನಿಷ್ಠ ಉಷ್ಣಾಂಶ 8 ರಿಂದ 10 ಡಿಗ್ರಿ ಸೆಂಟಿಗ್ರೇಡ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಹ ಕನಿಷ್ಠ ಉಷ್ಣಾಂಶ 12 ರಿಂದ 14 ಸೆಂಟಿಗ್ರೇಡ್ ದಾಖಲಾಗಲಿದೆ. ಹೀಗಾಗಿ ಚಳಿಯ ತೀವ್ರತೆ ಹೆಚ್ಚಾಗಬಹುದು ಎಂದು ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Hair Care: ಯುವಕರನ್ನು ಕಾಡುವ ಬೊಕ್ಕ ತಲೆಗೆ ಕಾರಣ ಏನು? ಇದಕ್ಕಿದೆ ಪರಿಹಾರ!