ಬೆಂಗಳೂರು: ಮಾಜಿ ಸಚಿವ ಮನೋಹರ್ ತಹಶೀಲ್ದಾರ್(Manohar Tehsildar) ಇಂದು ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಹರ್ ತಹಶೀಲ್ದಾರ್, ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದರು. ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ತಹಶೀಲ್ದಾರ್ ಅವರು ವಿಧಾನಸಭೆ ಉಪ ಸಭಾಪತಿ ಆಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ನಂತರ 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು. ಮಾಜಿ ಸಚಿವರು ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಮೃತದೇಹವನ್ನು ಹಾನಗಲ್ ಕೊಂಡೊಯ್ಯಲಿದ್ದು, NCJC ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಅವರ ಹುಟ್ಟುರಾದ ಅಕ್ಕಿಹೊಳಿ ಗ್ರಾಮದಲ್ಲಿ ತೋಟದ ಜಮೀನಿನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Basavaraja Bommai: ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ