Saturday, 23rd November 2024

Narendra Modi: ಪ್ರಧಾನಿ ಮೋದಿ ಮುಡಿಗೆ ಮತ್ತೆರಡು ಅತ್ಯುನ್ನತ ಪ್ರಶಸ್ತಿಗಳ ಗರಿ

narendra modi

ಗಯಾನ: ಪ್ರಧಾನಿ ನರೇಂದ್ರ ಮೋದಿ(Narendra Modi)ಗೆ ಗಯಾನಾ(Guyana)ದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ʻದಿ ಆರ್ಡರ್‌ ಆಫ್‌ ಎಕ್ಸ್‌ಲೆನ್ಸ್‌ʼ ಹಾಗೂ ಬಾರ್ಬಡೋಸ್‌ ದೇಶದ ಪ್ರತಿಷ್ಠಿತ ಆರ್ಡರ್‌ ಆಫ್‌ ಫ್ರೀಡಮ್‌ ಆಫ್‌ ಬಾರ್ಬಡೋಸ್‌ ಅವಾರ್ಡ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೊರೋನಾ ಸಮಯದಲ್ಲಿಕೋವಿಡ್‌ ಲಸಿಕೆ ಪೂರೈಕೆ ಸೇರಿದಂತೆ ಉಭಯ ದೇಶಗಳ ನಡುವಿನ ಭಾಂಧವ್ಯ ವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಕ್ಕಾಗಿ ನರೇಂದ್ರ ಮೋದಿ ಈ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗಯಾನಾ ಅಧ್ಯಕ್ಷ ಡಾ.ಇರ್ಫಾನ್ ಅಲಿ ಜಾರ್ಜ್‌ಟೌನ್‌ಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಗಯಾನಾದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ. ಇದು ನಮ್ಮ ಸಂಬಂಧಕ್ಕೆ, ನಿಮ್ಮ ಬದ್ಧತೆಗೆ ಜೀವಂತ ಸಾಕ್ಷಿಯಾಗಿದೆ. ಈ ಗೌರವ ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ಇನ್ನಷ್ಟು ಸ್ಫೂರ್ತಿ ನೀಡುತ್ತದೆ” ಎಂದು ಹೇಳಿದರು.

ಗಯಾನಾದ ಜಾರ್ಜ್‌ಟೌನ್‌ನಲ್ಲಿ ನಡೆಯುತ್ತಿರುವ ಭಾರತ-ಕೆರಿಕಮ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೊಮಿನಿಕಾ ದ್ವೀಪರಾಷ್ಟ್ರದ ಅಧ್ಯಕ್ಷೆ ಸಿಲ್ವೆನಿ ಬರ್ಟನ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಡೊಮಿನಿಕಾಗೆ 70 ಸಾವಿರ ಡೋಸ್ ಕೋವಿಡ್ ಲಸಿಕೆ ಅಸ್ಟ್ರಾಜೆನೆಕಾವನ್ನು ಪೂರೈಸುವ ಮೂಲಕ ನೆರವಾಗಿದ್ದರು. ಪ್ರಧಾನಿ ಮೋದಿಯ ಅವರ ಈ ಉದಾರತೆಯನ್ನು ಗುರುತಿಸಿ, ಡೊಮಿನಿಕಾ ಸರ್ಕಾರ ತನ್ನ ಅತ್ಯುನ್ನತ ನಾಗರಿಕ ಗೌರವಿಸಿದೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ನೈಜೀರಿಯಾ ಸರ್ಕಾರವು ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರ ಪ್ರದಾನ ಮಾಡಿತ್ತು. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದ್ದು, ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಪ್ರದಾನ ಮಾಡಿದ್ದರು. ಇದರೊಂದಿಗೆ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಈ ಹಿಂದೆ 1969ರಲ್ಲಿ ಇಂಗ್ಲೆಂಡ್‌ನ ರಾಣಿ ಎಲಿಜಬೆತ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಪ್ರಶಸ್ತಿ ಸ್ವೀಕರಿಸಿದ ನಂತರ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ ಅವರು, ಈ ಗೌರವವನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸಿದ್ದರು.

ಈ ಸುದಿಯನ್ನೂ ಓದಿ: Narendra Modi: ಜಾಗತಿಕ ಸಮಸ್ಯೆಗಳಿಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯದು; ನರೇಂದ್ರ ಮೋದಿ