Sunday, 24th November 2024

IDBI Bank Recruitment 2024: IDBI ಬ್ಯಾಂಕ್‌ನಲ್ಲಿದೆ 600 ಹುದ್ದೆ; ಆನ್‌ಲೈನ್‌ ಮೂಲಕ ಹೀಗೆ ಅಪ್ಲೈ ಮಾಡಿ

IDBI Bank Recruitment 2024

ಬೆಂಗಳೂರು: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (Industrial Development Bank of India) ಖಾಲಿ ಇರುವ ಬರೋಬ್ಬರಿ 600 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Bank Recruitment 2024). ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌, ಅಗ್ರಿಕಲ್ಚರ್‌ ಅಸೆಟ್‌ ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿಯೇ 65 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 30 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ – 500 ಹುದ್ದೆ, ವಿದ್ಯಾರ್ಹತೆ: ಪದವಿ
ಅಗ್ರಿಕಲ್ಚರ್‌ ಅಸೆಟ್‌ ಆಫೀಸರ್‌ – 100 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಸ್‌) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 250 ರೂ. ಮತ್ತು ಇತರ ಎಲ್ಲ ವಿಭಾಗದ ಅಭ್ಯರ್ಥಿಗಳು 1,050 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ ಮತ್ತು ವಾರ್ಷಿಕ ವೇತನ

ಆನ್‌ಲೈನ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ, ಪ್ರೀ ರಿಕ್ರೂಟ್‌ಮೆಂಟ್‌ ಮೆಡಿಕಲ್‌ ಟೆಸ್ಟ್‌ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾವರಿಗೆ 6,14,000 ರೂ. – 6,50,000 ರೂ. ವಾರ್ಷಿಕ ವೇತನ ದೊರೆಯಲಿದೆ. ಪರೀಕ್ಷೆ ಡಿಸೆಂಬರ್‌ ಅಥವಾ 2025ರ ಜನವರಿಯಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ ಲಾಜಿಕಲ್‌ ರೀಸನಿಂಗ್‌, ಡೇಟಾ ಅನಾಲಿಸಿಸ್‌, ಇಂಗ್ಲಿಷ್‌ ಭಾಷೆ, ಕ್ವಾಂಟಿಟೇಟಿವ್‌ ಅಪ್ಟಿಟ್ಯೂಡ್‌, ಜನರಲ್‌/ಎಕಾನಮಿ/ಬ್ಯಾಂಕಿಂಗ್‌/ಕಂಪ್ಯೂಟರ್‌/ಐಟಿ ಮತ್ತು ಐದ್ಯೋಗಿಕ ವಿಷಯಗಳ ಪ್ರಶ್ನೆಗಳಿರುತ್ತವೆ.

IDBI Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/idbijamnov24/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊಗಳನ್ನು ಸರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಐಡಿಬಿಐ ಬ್ಯಾಂಕ್‌ನ ಅದಿಕೃತ ವೆಬ್‌ಸೈಟ್‌ ವಿಳಾಸ: idbibank.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,248 ಹುದ್ದೆ; 10ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ