Friday, 22nd November 2024

BGT 2024-25: ಜೈಸ್ವಾಲ್‌-ರಾಹುಲ್‌ ಓಪನರ್ಸ್‌, ಭಾರತದ ಪ್ಲೇಯಿಂಗ್‌ XI ಆರಿಸಿದ ಆಕಾಶ್‌ ಚೋಪ್ರಾ!

'Yashasvi Jaiswal-KL Rahulʼ-Aakash Chopra predicts India’s playing XI for first Test

ಪರ್ತ್‌: ಆಸ್ಟ್ರೇಲಿಯಾ ವಿರುದ್ದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ (BGT 2024-25) ಸರಣಿಯ ಮೊದಲನೇ ಟೆಸ್ಟ್‌ ಪಂದ್ಯಕ್ಕೆ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಭಾರತ ತಂಡದ ಪ್ಲೇಯಿಂಗ್‌ XI ಅನ್ನು ಪ್ರಕಟಿಸಿದ್ದಾರೆ. ಉಭಯ ತಂಡಗಳ ನಡುವಣ ಮೊದಲನೇ ಪಂದ್ಯ ಶುಕ್ರವಾರ ಪರ್ತ್‌ನ ಆಪ್ಟಸ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಪಂದ್ಯದಲ್ಲಿ ಭಾರತ ತಂಡವನ್ನು ಉಪ ನಾಯಕ ಜಸ್‌ಪ್ರೀತ್‌ ಬುಮ್ರಾ ಮುನ್ನಡೆಸಲಿದ್ದಾರೆ. ಏಕೆಂದರೆ ಮೊದಲನೇ ಟೆಸ್ಟ್‌ ಪಂದ್ಯಕ್ಕೆ ನಾಯಕ ರೋಹಿತ್‌ ಶರ್ಮಾ ಅಲಭ್ಯರಾಗಲಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಆಕಾಶ ಚೋಪ್ರಾ, ಪರ್ತ್‌ ಟೆಸ್ಟ್‌ಗೆ ಭಾರತ ತಂಡದ ತಮ್ಮ ನೆಚ್ಚಿನ ಪ್ಲೇಯಿಂಗ್‌ XI ಅನ್ನು ಪ್ರಕಟಿಸಿದ್ದಾರೆ. ನಾಯಕ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಎಡಗೈ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ ಅವರ ಜತೆ ಕನ್ನಡಿಗ ಕೆಲ್‌ ರಾಹುಲ್‌ಗೆ ಇನಿಂಗ್ಸ್‌ ಆರಂಭಿಸಲು ಚೋಪ್ರಾ ಅವಕಾಶ ನೀಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭಮನ್‌ ಗಿಲ್‌ ಅನುಪಸ್ಥಿತಿಯಲ್ಲಿ ದೇವದತ್‌ ಪಡಿಕ್ಕಲ್‌ ಆಡಲಿದ್ದಾರೆ.

IND vs AUS: ಪರ್ತ್‌ನಲ್ಲಿ ಆಸ್ಟ್ರೇಲಿಯಾಗೆ ಭಾರತ ಚಾಲೆಂಜ್‌, ಗೆಲ್ಲುವ ನೆಚ್ಚಿನ ತಂಡ ಯಾವುದು?

ನಂತರ ನಾಲ್ಕನೇ ಕ್ರಮಾಂಕದಲ್ಲಿ ಎಂದಿನಂತೆ ಮಾಜಿ ನಾಯಕ ವಿರಾಟ್‌ ಕೊಹ್ಲಿ ಆಡಲಿದ್ದು, ನಂತರದ ಕ್ರಮಾಂಕದಲ್ಲಿ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ಗೆ ಅವಕಾಶ ನೀಡಾಗಿದೆ. ಆ ಮೂಲಕ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ ಆಡಿದ್ದ ಸರ್ಫರಾಝ್‌ ಖಾನ್‌ ಅವರನ್ನು ಆಕಾಶ್‌ ಚೋಪ್ರಾ ಕೈ ಬಿಟ್ಟಿದ್ದಾರೆ. ಇವರ ಬದಲು ಯುವ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಧ್ರುವ್‌ ಜುರೆಲ್‌ಗೆ ಅವಕಾಶ ಕಲ್ಪಿಸಿದ್ದಾರೆ. ಜುರೆಲ್‌ ಆಸ್ಟ್ರೇಲಿಯಾ ಎ ವಿರುದ್ದದ ಪಂದ್ಯದಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ್ದರು.

ನಂತರ ಸೀಮ್‌ ಬೌಲಿಂಗ್‌ ಆಲ್‌ರೌಂಡರ್‌ ಆಗಿ ನಿತೀಶ್‌ ಕುಮಾರ್‌ ರೆಡ್ಡಿಗೆ ಅವಕಾಶ ನೀಡಲಾಗಿದೆ. ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಆಕಾಶ ಚೋಪ್ರಾ ಆರ್‌ ಅಶ್ವಿನ್‌ ಅವರನ್ನು ತೆಗೆದುಕೊಂಡಿದ್ದು, ಮತ್ತೊಬ್ಬ ಸ್ಪಿನ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರನ್ನು ಕೈ ಬಿಟ್ಟಿದ್ದಾರೆ. ಇನ್ನು ವೇಗದ ಬೌಲಿಂಗ್‌ ವಿಭಾಗಕ್ಕೆ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಹಾಗೂ ಆಕಾಶ ಚೋಪ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

IND vs AUS: ಪರ್ತ್‌ ಟೆಸ್ಟ್‌ಗೆ ಮಳೆ ಭೀತಿ

ಪರ್ತ್‌ ಟೆಸ್ಟ್‌ಗೆ ಆಕಾಶ್‌ ಚೋಪ್ರಾ ಆಯ್ಕೆಯ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ಯಶಸ್ವಿ ಜೈಸ್ವಾಲ್‌, ಕೆಎಲ್‌ ರಾಹುಲ್‌, ದೇವದತ್‌ ಪಡಿಕ್ಕಲ್‌, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಧ್ರುವ್‌ ಜುರೆಲ್‌, ನಿತೀಶ್‌ ಕುಮಾರ್‌ ರೆಡ್ಡಿ, ಆರ್‌ ಅಶ್ವಿನ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಆಕಾಶ ಚೋಪ್ರಾ

ಸರ್ಫರಾಝ್‌ ಖಾನ್‌ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ

“ಮೊದಲನೇ ಟೆಸ್ಟ್‌ ಪಂದ್ಯಕ್ಕೆ ಸರ್ಫರಾಝ್‌ ಖಾನ್‌ ಅವರನ್ನು ಪರಿಗಣಿಸುವುದಿಲ್ಲವಾ? ನಿಮ್ಮ ರೀತಿ ನಾನು ಕೂಡ ಅವರ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದ್ದೇನೆ. ಇದು ಹೆಚ್ಚಿನ ವ್ಯತ್ಯಾಸವನ್ನು ಉಂಟು ಮಾಡುವುದಿಲ್ಲ ಎಂದು ನಾನು ಅಥವಾ ತಂಡ ಯೋಚನೆ ಮಾಡುತ್ತದೆ. ನೀವು ಅವರನ್ನು ಆಡಿಸಬೇಕೆಂದರೆ, ಕನಿಷ್ಠ ಒಂದು ಪಂದ್ಯಕ್ಕಾದರೂ ಅವರನ್ನು ಪ್ರಯತ್ನಿಸಬಹುದು,” ಎಂದು ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಕಾಶ್‌ ಚೋಪ್ರಾ ತಿಳಿಸಿದ್ದಾರೆ.