Saturday, 23rd November 2024

Physical Abuse: ಬಾಲಕಿಯನ್ನು ಗರ್ಭಿಣಿ ಮಾಡಿದ ಪಾತಕಿ ಸೋದರಮಾವ ಆರೆಸ್ಟ್!

Physical abuse

ಬೆಂಗಳೂರು: ಬೆಂಗಳೂರಿನಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋದರ ಮಾವನಿಂದಲೇ ಗರ್ಭಿಣಿಯಾಗಿರುವ ಘಟನೆ (Physical Abuse) ಬೆಂಗಳೂರಿನ (Bengaluru Crime News) ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬಾಲಕಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಸಮಯಕ್ಕೆ ಸರಿಯಾಗಿ ಮುಟ್ಟು ಆಗಲಿಲ್ಲ ಎಂದು ಮಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ತಾಯಿ ಕರೆದೊಯ್ದು ತಪಾಸಣೆ ಮಾಡಿಸಿದಾಗ ವೈದ್ಯರು ಬಾಲಕಿ ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ವಿಷಯ ತಿಳಿದ ಬಾಲಕಿಯ ತಾಯಿಗೆ ಅಘಾತವಾಗಿದೆ.

ಈ ಕುರಿತು ಬಾಲಕಿಯನ್ನು ವಿಚಾರಿಸಿದಾಗ, ಸೆಪ್ಟೆಂಬರ್‌ನಲ್ಲಿ ಸೋದರಮಾವ ಮನೆಗೆ ಬಂದಿದ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ವಿಷಯ ಬಹಿರಂಗವಾಗಿದೆ. ಕೂಡಲೇ ಬಾಲಕಿಯ ತಾಯಿಯು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ನೆಲಮಂಗಲ ಪೊಲೀಸರು 30 ವರ್ಷದ ಸೋದರ ಮಾವನನ್ನು ಬಂಧಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಬಿಎನ್​ಎಸ್ ಜೊತೆಗೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದು ಪತ್ನಿ ಹೊಡೆದು ತಲಾಕ್‌ ನೀಡಿದ ಪತಿ, ಸೆರೆ