ರಾಮನಗರ: ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಇವರು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 12ನೇ ಸುತ್ತಿನ ಅಂತ್ಯದ ವೇಳೆಗೆ 22,000 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದ 3 ಪ್ರತಿಷ್ಠಿತ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚನ್ನಪಟ್ಡಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 12ನೇ ಸುತ್ತಿನಲ್ಲಿ 22,000 ಮತಗಳ ಭಾರಿ ಮುನ್ನಡೆ ಸಾಧಿಸಿದ್ದು, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಿನ್ನಡೆಯಾಗಿದೆ.
ಇನ್ನು ಸಂಡೂರು ಕ್ಷೇತ್ರದಲ್ಲೂ ಕೈ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಸಾಧಿಸಿದ್ದು, 15ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 8,239 ಮತಗಳ ಮುನ್ನಡೆ ಪಡೆದಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ 12,251 ಮತಗಳ ಭಾರಿ ಮುನ್ನಡೆ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಹಿನ್ನಡೆಯಾಗಿದೆ.
ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಮಾಜಿ ಸಿಎಂಗಳ ಪುತ್ರರು ಭಾರಿ ಹಿನ್ನಡೆ ಅನುಭವಿಸಿದ್ದು, ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Karnataka Bypoll Result 2024: ರಾಜ್ಯದ 3 ಕ್ಷೇತ್ರದಲ್ಲಿಯೂ ಕಾಂಗ್ರೆಸ್ಗೆ ಮುನ್ನಡೆ