Sunday, 24th November 2024

Jama Mosque Violence: ಮಸೀದಿ ಸರ್ವೆಗೆ ಹೋದ ಅಧಿಕಾರಿಗಳಿಗೆ ಕಲ್ಲೇಟು; ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನ

Jama Mosque Violence

ಲಖನೌ: ಉತ್ತರ ಪ್ರದೇಶದ (Uttara Pradesh) ಸಂಭಾಲ್‌ದಲ್ಲಿರುವ ಶಾಹಿ ಜಾಮಾ ಮಸೀದಿಯು (Jama mosque Violence) ಈ ಮೊದಲು ದೇವಾಲಯವಾಗಿತ್ತೇ ಎಂದು ಪರಿಶೀಲನೆ ನಡೆಸಲು ಹೋದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ (Violence) ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಲಾಗಿತ್ತು. ಇದು ಮೊದಲು ಹರಿಹರ ದೇವಾಲಯವಾಗಿತ್ತು ಎಂಬ ವಕೀಲ ವಿಷ್ಣು ಶಂಕರ್ ಜೈನ್ ಅವರ ಅರ್ಜಿಯ ಮೇರೆಗೆ ನ್ಯಾಯಾಲಯವು ಸಮೀಕ್ಷೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ (ನ. 24) ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲು ಹೋಗಿತ್ತು. ಆದರೆ ಏಕಾಏಕಿ ಸ್ಥಳೀಯರು ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಿದ್ದಾರೆ.

ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಪ್ರತಿಭಟನೆ ಆರಂಭಿಸಿದರು. ಜನರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದೆ. ಘಟನೆಯಲ್ಲಿ ಹಲವು ಅಧಿಕಾರಿಗಳು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯುಗಳನ್ನು ಸಿಡಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನೆಯ ಬಗ್ಗೆ ಮಾತನಾಡಿದ ಸಂಭಾಲ್‌ ನಗರದ ಪೋಲೀಸ್‌ ವರಿಷ್ಠಾಧಿಕಾರಿ ಸಮೀಕ್ಷೆ ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Viral Video: ದೇಗುಲದೊಳಗೇ ಹಿಂದೂ ಯುವತಿಯೊಂದಿಗೆ ಚಕ್ಕಂದ! ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ; ವಿಡಿಯೋ ಫುಲ್‌ ವೈರಲ್‌