Monday, 25th November 2024

KPSC Recruitment 2024: 750 ಭೂ ಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC; ಹೀಗೆ ಅಪ್ಲೈ ಮಾಡಿ

KPSC Recruitment 2024

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ಮಾಪಕರು (Land Surveyor) ಹುದ್ದೆ ಇದಾಗಿದೆ. ಬರೋಬ್ಬರಿ 750 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹಿಂದೆ ಫೆಬ್ರವರಿಯಲ್ಲಿ 364 ಭೂ ಮಾಪಕರು ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿತ್ತು. ವಯೋಮಿತಿ ಮತ್ತು ತಾಂತ್ರಿಕ ಸಮಸ್ಯೆಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವ ಅಭ್ಯರ್ಥಿಗಳಿಗಾಗಿ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ (KPSC Recruitment 2024). ಜತೆಗೆ ಹುದ್ದೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ‌ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಡಿ. 9 (Job Guide).

ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಇ. (ಸಿವಿಲ್‌) / ಬಿ.ಟೆಕ್‌ (ಸಿವಿಲ್‌) ಅಥವಾ ಡಿಪ್ಲೊಮಾ (ಸಿವಿಲ್‌ ಎಂಜಿನಿಯರಿಂಗ್‌) ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು) ಅಥವಾ ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್‌ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೊಮಾ ಉತ್ತೀರ್ಣವಾಗಿರಬೇಕು ಇಲ್ಲವೇ ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್‌ ಸರ್ವೆ ಟ್ರೇಡ್‌ನಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಮತ್ತು ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾಗುವವರಿಗೆ 23,500 ರೂ.-47,650 ರೂ. ಮಾಸಿಕ ವೇತನ ದೊರೆಯಲಿದೆ. 2 ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಪತ್ರಿಕೆ-1: ಸಾಮಾನ್ಯ ಪ್ರಶ್ನೆ ಮತ್ತು ಪತ್ರಿಕೆ-2: ನಿರ್ದಿಷ್ಟ ವಿಷಯವನ್ನೊಳಗೊಂಡ ಪ್ರಶ್ನೆ. ತಲಾ 200 ಅಂಕಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ದಿನಾಂಕ ಶೀಘ್ರದಲ್ಲಿಯೇ ಪ್ರಕಟವಾಗಲಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://kpsc.kar.nic.in/)

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (HK)

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (RPC)

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-30574957/30574901ಕ್ಕೆ ಕರೆ ಮಾಡಿ ಅಥವಾ ವೆಬ್‌ಸೈಟ್‌ ವಿಳಾಸ: kpsc.kar.nic.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: IDBI Bank Recruitment 2024: IDBI ಬ್ಯಾಂಕ್‌ನಲ್ಲಿದೆ 600 ಹುದ್ದೆ; ಆನ್‌ಲೈನ್‌ ಮೂಲಕ ಹೀಗೆ ಅಪ್ಲೈ ಮಾಡಿ