Tuesday, 26th November 2024

Murder Case: ಬೆಂಗಳೂರಲ್ಲಿ ಮತ್ತೊಬ್ಬ ಯುವತಿಯ ಬರ್ಬರ ಹತ್ಯೆ; ಪ್ರೇಯಸಿಯನ್ನೇ ಚಾಕು ಇರಿದು ಕೊಂದ ಪ್ರಿಯಕರ!

Murder Case

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ನೇಪಾಳ ಮೂಲದ ಮಹಿಳೆಯ ಭೀಕರ ಹತ್ಯೆ ನಡೆದ ಬೆನ್ನಲ್ಲೇ ಅಂತಹುದೇ ಘಟನೆಯೊಂದು (Murder Case) ರಾಜಧಾನಿಯ ಇಂದಿರಾ ನಗರದ ಅಪಾರ್ಟ್‍ಮೆಂಟ್‌ನಲ್ಲಿ ನಡೆದಿದೆ. ಪ್ರೇಯಸಿಯನ್ನೇ ಪ್ರಿಯಕರ ಚಾಕು ಇರಿದು ಹತ್ಯೆ ಮಾಡಿದ್ದಾನೆ.

ಅಸ್ಸಾಂ ಮೂಲದ ಮಾಯಾ ಗೊಗಾಯ್ ಮೃತ ಯುವತಿ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಇಂದಿರಾ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ | Muda Case: ಮುಡಾ ಹಗರಣ; ಸಿಎಂ ವಿರುದ್ಧದ ಕೇಸ್‌ ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ಡಿ.10ಕ್ಕೆ ನಿಗದಿ

ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಂದು, ಪತ್ನಿ ಜತೆ ಪರಾರಿಯಾದ ಪುತ್ರ!

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಮಗನೊಬ್ಬ ಸುತ್ತಿಗೆಯಲ್ಲಿ ಹೊಡೆದು ತಂದೆಯನ್ನೇ ಕೊಂದ ಘಟನೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿಯೂ ಅಂತಹುದೇ ಘೋರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಲೆ ಮಾಡಿದ ಬಳಿಕ ಪತ್ನಿಯೊಂದಿಗೆ ಪುತ್ರ ಪರಾರಿಯಾಗಿದ್ದಾನೆ.

ಹಳೇ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ತಂದೆ ಮಗನ ನಡುವೆ ಆಸ್ತಿ ವಿಚಾರವಾಗಿ ನ. 19ರಂದು ಗಲಾಟೆಯಾಗಿತ್ತು ಎನ್ನಲಾಗಿದೆ. ಇಂದು ಕುಡಿದು ಬಂದ ಮಗ ಏಕಾಏಕಿ ತಂದೆಯನ್ನೇ ಮನಬಂದಂತೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಾಗರಾಜ್ (77) ಕೊಲೆಯಾದ ತಂದೆ. ಅಣ್ಣಪ್ಪ ತಂದೆಯನ್ನೇ ಕೊಂದ ಮಗ. ಕಂಠಪೂರ್ತಿ ಕುಡಿದು ಬಂದಿದ್ದ ಅಣ್ಣಪ್ಪ ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮಗ ಅಣ್ಣಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಅಣ್ಣಪ್ಪ ಪತ್ನಿ ಜತೆ ಎಸ್ಕೇಪ್ ಆಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Karnataka High Court: ಹಲವು ಕೇಸುಗಳಿರುವ ವಿಚಾರಣಾಧೀನ ಕೈದಿಗೆ ಜಾಮೀನು ಇಲ್ಲ: ಹೈಕೋರ್ಟ್

ನೆಲಮಂಗಲದಲ್ಲಿ ಮಹಿಳೆಯನ್ನು ಕೊಂದಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ!

ಬೆಂಗಳೂರು: ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಮಹಿಳೆಯನ್ನು ಕೊಂದು, ರುಂಡ ಹೊತ್ತೊಯ್ದಿದ್ದ ಚಿರತೆಯನ್ನು (Leopard Captured) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು, ಇದರಿಂದ ಆತಂಕದಲ್ಲಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ.

ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಕಳೆದ ವಾರ ಕರಿಯಮ್ಮ (55) ಎಂಬ ಮಹಿಳೆ ಚಿರತೆ ದಾಳಿಯಿಂದ ಮೃತಪಟ್ಟಿದ್ದರು. ಹೀಗಾಗಿ ಸತತ 1 ವಾರ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಚಿರತೆಯನ್ನು ಬಲಿ ಪಡೆದಿದ್ದ ಚಿರತೆ ಇದೇನಾ ಅಥವಾ ಬೇರೆಯದೋ ಎಂಬುವುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿಎನ್‌ಎ ಪರೀಕ್ಷೆಯ ಬಳಿಕ ಈ ಬಗ್ಗೆ ಧೃಡವಾಗಲಿದೆ.

ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಕರಿಯಮ್ಮ (55) ಎಂಬುವವರು ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಚಿರತೆ ದಾಳಿ ನಡೆಸಿ, ರುಂಡ ಹೊತ್ತೊಯ್ದಿತ್ತು. ಬಳಿಕ ಅಂತ್ಯ ಸಂಸ್ಕಾರದ ವೇಳೆಯೂ ಆಗಮಿಸಿದ್ದ ಆ ಚಿರತೆ ಮಹಿಳೆಯ ಮೃತದೇಹವನ್ನು ಎಳೆದೊಯ್ಯಲು ಪ್ರಯತ್ನಿಸಿತ್ತು. ಹೀಗಾಗಿ ಗ್ರಾಮದ ಸುತ್ತಮುತ್ತ ವನ್ಯ ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Manipur Violence: ಮಣಿಪುರ ಅಪಹರಣ-ಹತ್ಯೆ ಪ್ರಕರಣ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಯಲಾಯ್ತು ಕುಕಿ ಉಗ್ರರ ಅಟ್ಟಹಾಸ