ಬೆಂಗಳೂರು: ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ (BPNL Recruitment 2024). ಈ ಹಿಂದೆ ನ. 25 ಕೊನೆಯ ದಿನ ಎನ್ನಲಾಗಿತ್ತು. ಇದೀಗ ಡಿ. 5 ತನಕ ಅರ್ಜಿ ಸಲ್ಲಿಸಲು ಕಾಲವಕಾಶ ನೀಡಲಾಗಿದೆ. ಬರೋಬ್ಬರಿ 2,248 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಎಸ್ಸೆಸ್ಸೆಲ್ಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಲಘು ಉದ್ಯಮ ವಿಕಾಸ ಸಹಾಯಕ (Small Enterprise Development Assistant) – 1,686 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಲಘು ಉದ್ಯಮ ವಿಸ್ತಾರ ಅಧಿಕಾರಿ (Small Enterprise Extension Officer) – 562 ಹುದ್ದೆ, ವಿದ್ಯಾರ್ಹತೆ: ಪದವಿ
ವಯೋಮಿತಿ
ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-40 ವರ್ಷದೊಳಗಿರಬೇಕು. ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 21-45 ವರ್ಷದೊಳಗಿರಬೇಕು. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ನ ನಿಯಮಕ್ಕೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಗೆ – 826 ರೂ., ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಗೆ – 944 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್ಲೈನ್ ಮೂಲಕ ಪಾವತಿಸಬೇಕು. ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಾಸಿಕ ವೇತನ
ಆಯ್ಕೆಯಾದ ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಯ ಅಭ್ಯರ್ಥಿಗಳಿಗೆ 30,500 ರೂ. ಮತ್ತು ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಯ ಅಭ್ಯರ್ಥಿಗಳಿಗೆ 40,000 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
BPNL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://pay.bharatiyapashupalan.com/onlinerequirment) - ಅಗತ್ಯ ಮಾಹಿತಿಗಳನ್ನು ತುಂಬಿ.
- ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್ಲೋಡ್ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಹೆಚ್ಚಿನ ವಿವರಗಳಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ನ ವೆಬ್ಸೈಟ್ ವಿಳಾಸ: bharatiyapashupalan.comಗೆ ಭೇಟಿ ನೀಡಿ. ಫೋನ್ ನಂಬರ್: 0141-2202271, 9351899199ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: KPSC Recruitment 2024: 750 ಭೂ ಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC; ಹೀಗೆ ಅಪ್ಲೈ ಮಾಡಿ