ಬೆಂಗಳೂರು: ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಿತ ಹೇಳಿಕೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara Swamiji) ವಿಷಾದ ವ್ಯಕ್ತಪಡಿಸಿದ್ದಾರೆ. ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸ್ವಾಮೀಜಿ, ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರಿಗೆ ಮತದಾನದ ಹಕ್ಕು ರದ್ದುಪಡಿಸಬೇಕು ಎಂಬ ನನ್ನ ಹೇಳಿಕೆ ಚರ್ಚೆಗೆ ಕಾರಣವಾದೆ. ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.
ಸ್ವಾಮೀಜಿ ಏನು ಹೇಳಿದ್ದರು?
ವಕ್ಫ್ ಕಾಯ್ದೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ರಾಜಕೀಯದವರು ಮಾಡುತ್ತಿರುವುದು ಎಲ್ಲಾ ಓಟಿಗೋಸ್ಕರ. ಹೀಗಾಗಿ ನಮ್ಮ ದೇಶದಲ್ಲಿ ಮುಸ್ಲಿಮರಿಗೆ ಓಟಿನ ಹಕ್ಕು ಇಲ್ಲದಂತೆ (Waqf row) ಕಾನೂನು ಮಾಡಬೇಕು ಎಂದು ಹೇಳಿದ್ದರು.
ಯಾರದೋ ವಸ್ತುವನ್ನು ಯಾರೋ ಕಿತ್ತುಕೊಳ್ಳುವುದು ಧರ್ಮವಲ್ಲ. ಹೀಗಾಗಿ ಎಲ್ಲರೂ ಹೋರಾಟ ಮಾಡಿ ರೈತರ ಜಮೀನುಗಳನ್ನು ಉಳಿಸಬೇಕು. ಪ್ರಪಂಚದಲ್ಲಿ ಇರುವ ಎಲ್ಲ ಜನರಿಗೆ ಅನ್ನ ನೀಡುವ ಕೆಲಸ ಮಾಡುತ್ತಿರುವುದು ರೈತ. ಆದ್ದರಿಂದ ರೈತನಿಗೆ ಬೆಂಬಲವಾಗಿ ನಿಲ್ಲಬೇಕು. ಯಾವ ಕಾನೂನೂ ಇಲ್ಲದೇ ಹೇಗೆ ರೈತರ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದರು.
ಇನ್ನು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಆಗ, ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಆಗಲಿದೆ ಎಂದು ತಿಳಿಸಿದ್ದರು. ಈ ಹೇಳಿಕೆಗೆ ಮುಸ್ಲಿಮರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | MB Patil: ಜನವರಿಯಲ್ಲಿ ‘ಏಕಗವಾಕ್ಷಿ ವ್ಯವಸ್ಥೆ’ ಉದ್ಘಾಟನೆಗೆ ಸಿದ್ಧ; ಎಂ.ಬಿ. ಪಾಟೀಲ
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್ಐಆರ್
ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social media) ಕೋಮು ವೈಷಮ್ಯ (Communal hatred) ಪ್ರಚೋದಿಸುವ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ (Shakuntala Nataraj) ವಿರುದ್ಧ ತುಮಕೂರಿನ (Tumkur news) ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, “ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ” ಎಂದು ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
Road Accident: ಬೆಂ-ಮೈ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ, ದಂಪತಿ ಸೇರಿ ಮೂವರ ದುರ್ಮರಣ