ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣಾಂಶ ಕುಸಿಯುತ್ತಿರುವುದರಿಂದ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಈ ನಡುವೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಫೆಂಗಲ್ ಚಂಡಮಾರುತ ಉಂಟಾಗಿರುವುದರಿಂದ ತಮಿಳುನಾಡು ಮಾತ್ರವಲ್ಲದೆ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ನ. 28ರಂದು ಕೋಲಾರ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (Karnataka Weather) ತಿಳಿಸಿದೆ.
ಇನ್ನು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುರುವಾರ ಒಣ ಹವೆ ಇರುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-3) ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.
ಅದೇ ರೀತಿ ನ.29ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಹಗುರ/ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದ್ದು, ಉತ್ತರ ಅಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-2) ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗಿರುವ ಸಾಧ್ಯತೆಯಿದೆ.
ಇನ್ನು ನ. 30ರಂದು ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಮತ್ತು ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು, ಕರಾವಳಿಯ ಉಳಿದ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಉತ್ತರ ಅಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-2) ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗಿರುವ ಸಾಧ್ಯತೆಯಿದೆ.
ಡಿ.1ರಂದು ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಮಂಡ್ಯ ಹಾಸನ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳ ಕರ್ನಾಟಕದ ಮೇಲೆ ಒಣ ಹವೆ ಇರುವ ಸಾಧ್ಯತೆ ಇದೆ. ಉತ್ತರ ಅಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-2) ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯ ಹವಾಮಾನ ಡಿ.3ರವರೆಗೆ ಮುಂದುವರಿಯಲಿದೆ.
ನ.29ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 25 ಮತ್ತು 18 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 25 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.
ಈ ಸುದ್ದಿಯನ್ನೂ ಓದಿ | BPNL Recruitment 2024: ಗಮನಿಸಿ; ಭಾರತೀಯ ಪಶುಪಾಲನಾ ನಿಗಮದ 2,248 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ