ಗೌರಿಬಿದನೂರು : ಮುಂದಿನ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಸಮಾಜದ ಸೇವಕ ಡಾ.ಕೆಂಪರಾಜು ತಿಳಿಸಿದರು.
ನಗರದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸ್ವಗೃಹದಲ್ಲಿ ಹಮ್ಮಿಕೊಂಡಿದ್ದ ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದರು.
ತಾಲ್ಲೂಕಿನಾದ್ಯಂತ ತಮ್ಮದೇ ಆದ ಅಭಿಮಾನಿ ಬಳಗ ಮತ್ತು ಮತ ಬ್ಯಾಂಕನ್ನು ಹೊಂದಿದ್ದು, ಇದನ್ನು ಸಹಿಸದ ಕೆಲವು ಕಿಡಿಗೇಡಿಗಳು ನಮ್ಮ ಮೇಲೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಯಾರು ಏನೇ ಮಾಡಿದರೂ ಕ್ಷೇತ್ರದ ಜನರ ಸೇವೆ ಮಾಡಲು ನಾವು ಸಿದ್ದವಾಗಿದ್ದೇವೆ. ಇಂದಿನಿAದ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡು, ಗ್ರಾಮ ಮಟ್ಟದಲ್ಲಿ ಉತ್ತಮ ಕೆಲಸ ಮಾಡುವಂತಹ ಉತ್ಸಾಹಿ ಅಭ್ಯರ್ಥಿಗಳ ಪಡೆಯೇ ನಮ್ಮ ಜತೆಗಿದೆ ಎಂದರು.
ಮುಂದಿನ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಆಯ್ಕೆ ಮಾಡಿ ಕಣಕ್ಕಿಳಿಸಲಾಗುವುದು, ಹಾಗೂ ಕಳೆದ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ನಮ್ಮನ್ನು ಕಾಂಗ್ರೆಸ್ ಗೆಲ್ಲಿಸಲು ಬಂದಿದ್ದಾರೆ, ಎಂದು ಪ್ರಚಾರ ಮಾಡಿದ್ದರು, ಇಂದು ಅವರೇ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಕಳೆದ ಬಾರಿ ನಾವು ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಲಾಗಿತ್ತೆ ಹೊರತು ನಾವು ಬಿಜೆಪಿಗೆ ಸೇರ್ಪಡೆ ಆಗಿರಲಿಲ್ಲ. ಈ ಬಾರಿಯು ಸಹ ಪಕ್ಷೇತರವಾಗಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಎದುರಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ, ಸತೀಶ್, ರಾಜಶೇಖರ್, ಆನಂದ್, ಎಚ್ ಎಲ್ ವೆಂಕಟೇಶ್, ನರಸಿಂಹ ಮೂರ್ತಿ, ವೇಣು, ಆದಿ ಮೂರ್ತಿ ರೆಡ್ಡಿ, ಸಂದೀಪ್, ರಂಗಣ್ಣ ಅಂಜಿನಪ್ಪ, ಅಶ್ವತಪ್ಪ, ಮುಂತಾದವರು ಉಪಸ್ಥಿತರಿದ್ದರು.