Wednesday, 27th November 2024

Chikkaballapur News: ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ

ಚಿಕ್ಕಬಳ್ಳಾಪುರ : ಕಾರ್ಮಿಕ ಇಲಾಖೆಯಲ್ಲೊ ನೋಂದಾಯಿತ ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಪರಿಚಯ ಮಾಡಿದೆ.ಇದರ ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ.ಬಿ  ತಿಳಿಸಿದರು.  

ನಗರ ಹೊರವಲಯ ಜಿಲ್ಲಾಡಳಿತ ಭವನದ ಕಾರ್ಮಿಕ ಇಲಾಖೆಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಫಲಾನುಭವಿಗಳು ಮಂಡಳಿಯ ನೂತನ ತಂತ್ರಾAಶದಲ್ಲಿ ನೋಂದಣಿ, ನವೀಕರಣ, ಇ-ಕಾರ್ಡ್ ಜನರೇಷನ್, ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಎಸ್.ಎಸ್.ಪಿ ಪೋರ್ಟಲ್ ಮೂಲಕ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಸಲ್ಲಿಸುವ ಬಗ್ಗೆ ಜಿಲ್ಲಾ ಮಟ್ಟದ ಸಕ್ರಿಯ ಟ್ರೇಡ್ ಯೂನಿಯನ್‌ಗಳಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ, ಜಿಲ್ಲೆಯ ಎಲ್ಲಾ ಟ್ರೇಡ್ ಯೂನಿಯನ್ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕರು ಹಾಗೂ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.