ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ(Jharkhand Chief Minister) ಹೇಮಂತ್ ಸೊರೇನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆಗೆ ಸೊರೇನ್ ಅವರು ಜಾರ್ಖಂಡ್ನ 14 ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಹೇಮಂತ್ ಸೊರೇನ್(Hemant Soren) ಜಾರ್ಖಂಡ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿರುವ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
जोहार साथयों ,
— Hemant Soren (@HemantSorenJMM) November 28, 2024
आज का दिन ऐतिहासिक होगा – एक ऐसा दिन जो हमारे सामूहिक संघर्ष, प्रेम-भाईचारे की भावना और न्याय के प्रति हम झारखंडियों के प्रतिबद्धता को और मजबूत करेगा।
झारखंड की महान धरा ने हमेशा से विरोध और संघर्ष को जन्म दिया है और झामुमो – भगवान बिरसा, भगवान सिदो-कान्हू, अमर… pic.twitter.com/P2xVe7fQcg
ಪ್ರಮಾಣ ವಚನ ಸಮಾರಂಭವು ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಪ್ರಮಾಣ ವಚನ ಬೋಧಿಸಲಿದ್ದು, ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಬ್ಲಾಕ್ನ ಹಲವಾರು ಉನ್ನತ ನಾಯಕರು ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಮಾಡಿರುವ ಸೊರೇನ್, ತಮ್ಮ ಪ್ರಮಾಣವಚನವನ್ನು “ನಮ್ಮ ಸಾಮೂಹಿಕ ಹೋರಾಟ, ಪ್ರೀತಿ ಮತ್ತು ಸಹೋದರತ್ವದ ಮನೋಭಾವ ಮತ್ತು ನ್ಯಾಯದ ಕಡೆಗೆ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಐತಿಹಾಸಿಕ ದಿನ” ಎಂದು ಕರೆದಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೋರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ 81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗಳಿಸುವ ಮೂಲಕ ಗೆದ್ದಿದೆ. ಮಹಾಮೈತ್ರಿಕೂಟ ಬಿಜೆಪಿ ನೇತೃತ್ವದ ಎನ್ಡಿಎಯನ್ನು 24 ಸ್ಥಾನಗಳಿಗೆ ಸೀಮಿತಗೊಳಿಸಿತು. ಹೇಮಂತ್ ಸೋರೆನ್ ಬರ್ಹೈತ್ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಗಮ್ಲಿಲ್ ಹೆಂಬ್ರೋಮ್ ಅವರನ್ನು 39,791 ಮತಗಳ ಅಂತರದಿಂದ ಸೋಲಿಸಿದರು. ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ಗಂಡೇಯ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.
ಈ ಸುದ್ದಿಯನ್ನೂ ಓದಿ:Champai Soren: ಬಿಜೆಪಿ ಸೇರ್ಪಡೆಯಾದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್