ಹರಿಯಾಣ : ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದರು. ಅವರ ಕೋವಿಡ್- 19 ಪರೀಕ್ಷಾ ವರದಿ ಬಂದಿದ್ದು, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಟ್ವಿಟ್ ಮಾಡಿರುವ ಹರಿಯಾಣ ಸಚಿವ ಅನಿಲ್ ವಿಜ್, ಕರೋನಾ ಪರೀಕ್ಷೆಗೆ ಒಳಗಾಗಿದ್ದೆ. ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅಂಬಾಲಾ ಕ್ಯಾಂಟ್ ನಲ್ಲಿನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದೆ. ನನ್ನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಎಲ್ಲರೂ ಕರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.
ಅನಿಲ್ ವಿಜ್ ಅವರು ನವೆಂಬರ್ 20 ರಂದು ಅಂಬಾಲಾದ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್‌ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದರು.
ಕೋವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಕ್ಕೆ ಹರ್ಯಾಣದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಮಾರಕ ಕೊರೊನಾ ವೈರಸ್‌ಗೆ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೊವ್ಯಾಕ್ಸಿನ್ ಲಸಿಕೆ ಯನ್ನು, ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸ್ವೀಕರಿದ್ದರು.
ಅಂಬಾಲಾದ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ಅನಿಲ್ ವಿಜ್ ಅವರ ಮೇಲೆ ಯಶಸ್ವಿಯಾಗಿ ಪ್ರಯೋಗ ಮಾಡಲಾ ಯಿತು. ಅನಿಲ್ ವಿಜ್ ಸ್ವಯಂಪ್ರೇರಿತರಾಗಿ ಕೊವ್ಯಾಕ್ಸಿನ್ ಲಸಿಕೆಯನ್ನು ತಮ್ಮ ಮೇಲೆ ಪ್ರಯೋಗ ಮಾಡುವಂತೆ ಕೋರಿಕೊಂಡಿ ದ್ದರು.
ಲಸಿಕೆ ಪಡೆದ ಮೇಲೆ ಅವರ ದೇಹದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದರು. ಆದರೆ ಸುಮಾರು 10 ದಿನಗಳ ಬಳಿಕ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.