Thursday, 28th November 2024

Pralhad Joshi: ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ನಂ.1

pralhad joshi

ನವದೆಹಲಿ: ಕೇಂದ್ರ ಸರ್ಕಾರ (Central Government) ಹೈನುಗಾರಿಕೆಗೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ಅಗ್ರ ಸ್ಥಾನದಲ್ಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನರೇಂದ್ರ ಮೋದಿ (PM Narendra Modi) ಅವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ. ಪರಿಣಾಮ ಭಾರತ ಈಗ ಅತ್ಯಧಿಕ ಹಾಲು ಉತ್ಪಾದಕ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದಿದ್ದಾರೆ.

2023-24 ರಲ್ಲಿ 3.78ರಷ್ಟು ಹೆಚ್ಚಳ: ಭಾರತದಲ್ಲಿ 2023-24ರಲ್ಲಿ 3.78ರಷ್ಟು ಹಾಲು ಉತ್ಪಾದಕತೆ ಹೆಚ್ಚಿದೆ. ಹೀಗಾಗಿ ಭಾರತ ಈಗ ಕ್ಷೀರ ಸಾಗರವಾಗಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಆರ್‌. ಅಶೋಕ್‌ ಆರೋಪ

239.30 ಮಿಲಿಯನ್ ಟನ್ ಹಾಲು ಉತ್ಪಾದನೆ

ಭಾರತದಲ್ಲಿ ಈಗ ಬರೋಬ್ಬರಿ 239.30 ಮಿಲಿಯನ್ ಟನ್ ಹಾಲು ಉತ್ಪಾದನೆಯಾಗುತ್ತಿದೆ. ಕಳೆದ ದಶಕಕ್ಕೆ ಹೋಲಿಸಿದರೆ ದುಪ್ಪಟ್ಟು ಹೆಚ್ಚಳ ಕಂಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | K-4 Ballistic Missile: ಜಲಾಂತರ್ಗಾಮಿ ನೌಕೆಯಿಂದ 3,500 ಕಿ.ಮೀ. ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕ್ಷಿಪಣಿಯ ಯಶಸ್ವಿ ಉಡಾವಣೆ

ದೇಶದಲ್ಲಿ 2013-14 ರಲ್ಲಿ 146.3 ಮಿಲಿಯನ್ ಟನ್ ಹಾಲು ಉತ್ಪಾದನೆ ಆಗುತ್ತಿತ್ತು. ಈಗ ತಮ್ಮ ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹ, ಬೆಂಬಲ ನೀಡುತ್ತಿರುವುದರಿಂದ ರೈತರೂ ಇದನ್ನೊಂದು ಉದ್ಯಮವನ್ನಾಗಿ ಮಾಡಿಕೊಂಡಿದ್ದಾರೆ. ಇದು ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಪರಿಕಲ್ಪನೆಗೆ ಪುಷ್ಠಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.