ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ ಎಂಬುದಾಗಿ ಗುರುತಿಸಲಾಗಿದೆ.
ಬೊಮ್ಮನಕಟ್ಟೆ ಬಡವಾಣೆಯಲ್ಲಿದ್ದಂತ ರಾಜೇಶ್ ಶೆಟ್ಟಿ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಚ್ಚಿ ಪರಾರಿಯಾಗಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ. ಹಳೆಯ ದ್ವೇಷದ ಕಾರಣಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲಿಸಿ ನಡೆಸಿ ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Actor Darshan: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿಕೆ
ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಹೈದರಾಬಾದ್‌ನಲ್ಲಿ ಅರೆಸ್ಟ್
ಚಿಂಚೋಳಿ(ಕಲಬುರಗಿ): 80 ವರ್ಷದ ವೃದ್ದೆ ಮೇಲೆ ಅತ್ಯಾಚಾರ (Physical Abuse) ಎಸಗಿ, ಬೆಳ್ಳಿ ಸರ ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಯಾಬ್ ಮೀರಾನಶಾ ಫಕ್ಕಿರ ಬಂಧಿತ ಆರೋಪಿ. ನ. 18 ರಂದು ತಾಲೂಕಿನ ಗ್ರಾಮವೊಂದರ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಐನೋಳಿ ಗ್ರಾಮದವನಾಗಿದ್ದ. ಈತ ಕುಟುಂಬಕ್ಕೆ ಬೇಡವಾದ ವ್ಯಕ್ತಿಯಾಗಿದ್ದರಿಂದ ಊರಿಂದ ಊರಿಗೆ ಅಡ್ಡಾಡುವ ಅಲೆಮಾರಿಯಾಗಿದ್ದ. ಹೀಗಾಗಿ ಇವನನ್ನು ವಶಕ್ಕೆ ಪಡೆಯುವುದು ಇಲಾಖೆಗೆ ತಲೆನೋವಾಗಿ ಪರಿಣಮಿಸಿತ್ತು.
ಆರೋಪಿ ಪತ್ತೆಗಾಗಿ ಡಿವೈಎಸ್‌ಪಿ ಸಂಗಮನಾಥ ಹಿರೇಮಠ ಅವರ ಮಾರ್ಗದರ್ಶನದಲ್ಲಿ ಚಿಂಚೋಳಿ ಸಿಪಿಐ ಕಪೀಲದೇವ, ಪಿಎಸ್ಐ ಗಂಗಮ್ಮ ಜಿನಕೇರಿ, ಮಡಿವಾಳಪ್ಪ ಬಾಗೋಡಿ, ವೆಂಕಟೇಶ ನಾಯಕ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿತ್ತು. 12 ದಿನಗಳಲ್ಲಿ ಆರೋಪಿ ತಯಾಬ್ ಮೀರಾನಶಾ ಫಕ್ಕಿರನನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿ ಕಂಡರು.
ಈ ಆರೋಪಿಯ ಮೇಲೆ ನೆರೆಯ ತೆಲಂಗಾಣ ರಾಜ್ಯದ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿ, ಬಂಧನದ ವಾರೆಂಟ್ ಜಾರಿ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗೆ ಶುಕ್ರುವಾರ ಬೆಳಗ್ಗೆ ಹೈದರಾಬಾದ್‌ನಲ್ಲಿ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.