ನವದೆಹಲಿ: ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗ ವಾಗಿ ದೇಶದ ಗಣ್ಯರು, ರಾಜಕೀಯ ನಾಯಕರು, ಶ್ರೀಸಾಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಮುಂಬೈಯ ದಾದಾರ್ ನ ಚೈತ್ಯಭೂಮಿಯಲ್ಲಿ ಜನರು ಸಾಲಿನಲ್ಲಿ ನಿಂತು ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ ಮಹಾನ್ ಚೇತನಕ್ಕೆ ಗೌರವ ಸಲ್ಲಿಸುತ್ತಿದ್ದಾರೆ.
ಮಹಾಪರಿನಿರ್ವಾಣ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್ ರನ್ನು ನೆನೆಸಿಕೊಂಡರು. ಅಂಬೇಡ್ಕರ್ ಅವರ ಆಲೋಚನೆ ಮತ್ತು ಅಭಿಪ್ರಾಯಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ನಮ್ಮ ದೇಶದ ಬಗ್ಗೆ ಇಟ್ಟಿರುವ ಕನಸನ್ನು ಈಡೇರಿ ಸಲು ನಾವು ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಾಬಾಸಾಹೇಬ್ ಅವರು ಹಾಕಿ ಕೊಟ್ಟ ಹಾದಿಯಲ್ಲಿ ಮೋದಿ ಸರ್ಕಾರ ಸಮಾಜದ ಏಳಿಗೆಗಾಗಿ, ದಶಕಗಳಿಂದ ತುಳಿತಕ್ಕೊಳಗಾದವರ ಅಭಿವೃದ್ಧಿಗಾಗಿ ಬದ್ಧತೆ ಯಿಂದ ಕೆಲಸ ಮಾಡುತ್ತಿದೆ ಎಂದಿದ್ದಾರೆ.