Thursday, 26th December 2024

MLA Munirathna: ಕೊಲೆಗೆ ಸುಪಾರಿ; ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌

MLA Munirathna

ಬೆಂಗಳೂರು: ಕೊಲೆ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಜೈಲಿಗೆ ಹೋಗಿ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನಗೆ (MLA Munirathna) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆ ಯತ್ನ, ಸುಪಾರಿ ಆರೋಪದಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಶನಿವಾರ, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಎಫ್ಐಆರ್ ದಾಖಲಾಗಿರುವುದರಿಂದ ಶಾಸಕನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸದ್ಯ ನಂದಿನಿ ಲೇಔಟ್ ಪೊಲೀಸರಿಂದ ತನಿಖೆ ಶುರುವಾಗಿದೆ.

ಇನ್ನು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಶಾಸಕ ಮುನಿರತ್ನ ಅವರದ್ದೇ ಎಂಬುವುದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಪ್ರಕರಣದಲ್ಲಿ ಮುನಿರತ್ನರನ್ನು ಬಂಧಿಸಿದ್ದ ಪೊಲೀಸರು ಅವರ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಎಫ್​ಎಸ್​ಎಲ್​ಗೆ ಕಳುಹಿಸಿದ್ದರು. ಆಡಿಯೋ ಮತ್ತು ಮುನಿರತ್ನ ಧ್ವನಿ ಮ್ಯಾಚ್ ಮಾಡಿ ಪರೀಕ್ಷಿಸಿದಾಗ, ಧ್ವನಿ ಮುನಿರತ್ನರದ್ದೇ ಎಂದು ರಿಪೋರ್ಟ್ ಕೊಟ್ಟಿದ್ದರು.

ಈ ಸುದ್ದಿಯನ್ನೂ ಓದಿ | Physical abuse: ಮಲ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ವ್ಯಕ್ತಿಗೆ 141 ವರ್ಷ ಜೈಲು ಶಿಕ್ಷೆ

ಇತ್ತೀಚೆಗೆ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದ್ದರು. ಸುಮಾರು 1 ತಿಂಗಳ ಬಳಿಕ ಸೆರೆವಾಸದಿಂದ ಅವರಿಗೆ ಅ.16ರಂದು ಮುಕ್ತಿ ಲಭಿಸಿತ್ತು.  ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಾಸಕನಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ ಎಂಬುದಾಗಿ ಗುರುತಿಸಲಾಗಿದೆ.

ಬೊಮ್ಮನಕಟ್ಟೆ ಬಡವಾಣೆಯಲ್ಲಿದ್ದಂತ ರಾಜೇಶ್ ಶೆಟ್ಟಿ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಚ್ಚಿ ಪರಾರಿಯಾಗಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ. ಹಳೆಯ ದ್ವೇಷದ ಕಾರಣಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲಿಸಿ ನಡೆಸಿ ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.