ಭೋಪಾಲ್: ಇ- ರಿಕ್ಷಾದಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಪಾದ ಮುಟ್ಟಿ ಕ್ಷಮೆ ಕೇಳಲು ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Madhya Pradesh’s Gwalior) ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಪಾದವ್ ಪೊಲೀಸ್ ಠಾಣಾ ವ್ಯಾಪ್ತಿಯ ( Padav police station) ಫೂಲ್‌ಬಾಗ್ ಚೌಕದಲ್ಲಿ ಇ-ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಇ-ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸರಗೊಂಡ ಯುವತಿ ಇ-ರಿಕ್ಷಾದಿಂದ ಹೊರಬಂದು ವ್ಯಕ್ತಿಯನ್ನು ರಿಕ್ಷಾದಿಂದ ಹೊರಗೆಳೆದು ಸಾರ್ವಜನಿಕವಾಗಿ ನಿಂದಿಸಿದ್ದಾಳೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಯುವತಿಗೆ ಸಾಥ್ ನೀಡಿದ್ದಾರೆ. ಅವರು ಸೇರಿ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದು ಯುವತಿಯ ಪಾದ ಮುಟ್ಟಿ ಕ್ಷಮೆ ಕೇಳುವಂತೆ ಹೇಳಿದ್ದಾರೆ. ಸಾಕಷ್ಟು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
#WATCH | Gwalior: Man Thrashed With 'Chappals' For Misbehaving With Girl; Touches Women's Feet In Apology#MadhyaPradesh #gwalior #MPNews pic.twitter.com/qCUPHL970A
— Free Press Madhya Pradesh (@FreePressMP) November 30, 2024
ವಿಡಿಯೋದಲ್ಲಿ ಆರೋಪಿ ವ್ಯಕ್ತಿ ಯುವತಿ ಮತ್ತು ಮಹಿಳೆಯ ಪಾದಗಳನ್ನು ಮುಟ್ಟಿ ಕ್ಷಮೆ ಯಾಚಿಸುತ್ತಿರುವುದನ್ನು ಕಾಣಬಹುದು. ಈ ಕುರಿತು ಪ್ರತಿಕ್ರಿಯಿಸಿರುವ ಪಾದವ್ ಠಾಣೆ ಪೊಲೀಸರು, ಈ ಬಗ್ಗೆ ಯುವತಿ ಇನ್ನೂ ಔಪಚಾರಿಕವಾಗಿ ದೂರು ದಾಖಲಿಸಿಲ್ಲ ಎಂದು ತಿಳಿಸಿದ್ದಾರೆ. ದೂರು ನೀಡಿದರೆ ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಸರು.
Viral Video: ಮಹಿಳೆಗೆ ಡಿಕ್ಕಿ ಹೊಡೆದು ಕೆಲ ದೂರ ಎಳೆದೊಯ್ದ ಕಾರು- ಭೀಕರ ದೃಶ್ಯ ವೈರಲ್
ಕಳೆದ ಎಪ್ರಿಲ್‌ನಲ್ಲಿ ಭೋಪಾಲ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಇದರಲ್ಲಿ ಯುವತಿಯೊಬ್ಬಳು ಆರೋಪಿಗೆ ಚಪ್ಪಲಿಯಿಂದ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.