Thursday, 19th September 2024

ಅಭ್ಯಾಸ ಪಂದ್ಯ: ರಹಾನೆ ಶತಕ, ಪೂಜಾರ ಫಿಫ್ಟಿ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಪೂರ್ವ ಸಿದ್ಧತೆಗಾಗಿ ಆಸ್ಟ್ರೇಲಿಯಾ ‘ಎ’ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ, ನಾಯಕ ಅಜಿಂಕ್ಯ ರಹಾನೆ ಅಜೇಯ ಶತಕ (108*) ಹಾಗೂ ಚೇತೇಶ್ವರ ಪೂಜಾರ ಅರ್ಧಶತಕದ (54) ನೆರವಿನಿಂದ ನಿಗದಿತ 90 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 237 ರನ್ ಪೇರಿಸಿದೆ.

ಡ್ರಮೊಯ್ನ್ ಓವಲ್ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ‘ಎ’ ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ರಾದ ಪೃಥ್ವಿ ಶಾ ಹಾಗೂ ಶುಭಮನ್ ಗಿಲ್ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು. ಹನುಮ ವಿಹಾರಿ (15) ಕೂಡಾ ಹೆಚ್ಚು ನಿಲ್ಲಲಾಗಲಿಲ್ಲ.

ಈ ಹಂತದಲ್ಲಿ ಜೊತೆಗೂಡಿದ ಚೇತೇಶ್ವರ ಪೂಜಾರ ಹಾಗೂ ನಾಯಕrhAn ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಿದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 76 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ಆಕರ್ಷಕ ಅರ್ಧಶತಕ ಸಾಧಿಸಿದ ಪೂಜಾರ 140 ಎಸೆತಗಳಲ್ಲಿ ಐದು ಬೌಂಡರಿಗಳಿಂದ 54 ರನ್ ಗಳಿಸಿದರು.

228 ಎಸೆತಗಳನ್ನು ಎದುರಿಸಿದ ರಹಾನೆ 16 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 108 ರನ್ ಗಳಿಸಿ ಅಜೇಯರಾಗುಳಿದರು. ಇನ್ನು ಳಿದಂತೆ ಕುಲ್‌ದೀಪ್ ಯಾದವ್ (15) ಹಾಗೂ ಉಮೇಶ್ ಯಾದವ್ (24) ರನ್ ಗಳಿಸಿದರು. ಆಸ್ಟ್ರೇಲಿಯಾ ‘ಎ’ ತಂಡದ ಪರ ಜೇಮ್ಸ್ ಪ್ಯಾಟಿನ್ಸನ್ ಮೂರು ಮೈಕಲ್ ನೆಸರ್ ಹಾಗೂ ನಾಯಕ ಟ್ರಾವಿಸ್ ಹೆಡ್ ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು.