ಅಡಿಲೇಡ್: ಆಸ್ಟ್ರೇಲಿಯಾ ವಿರುದ್ದ ಅಡಿಲೇಡ್ ಟೆಸ್ಟ್ ಪಂದ್ಯಕ್ಕೂ (IND vs AUS) ಮುನ್ನ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ. ಟೀಮ್ ಇಂಡಿಯಾ ಸ್ಟಾಋ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಮೊಣಕಾಲಿಗೆ ಬ್ಯಾಡೇಜ್ ಕಟ್ಟಿಕೊಂಡಿರುವುದು ಕಾಣಿಸಿಕೊಂಡಿದೆ. ಆ ಮೂಲಕ ಅಡಿಲೇಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 295 ರನ್‌ಗಳ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆದಿದೆ. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ಶತಕವನ್ನು ಸಿಡಿಸಿದ್ದರು. ಈ ಪಂದ್ಯದಲ್ಲಿ ಅವರು 30ನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದ್ದರು. ಆ ಮೂಲಕ ಅಡಿಲೇಡ್ ಟೆಸ್ಟ್‌ಗೂ ಮುನ್ನ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್‌ಗೆ ಮರಳಿದ್ದರು.
ವಿರಾಟ್ ಕೊಹ್ಲಿಗೆ ಗಾಯ?
ಇದೀಗ ಅಡಿಲೇಡ್ ತಲುಪಿರುವ ಭಾರತ ತಂಡ, ಡಿಸೆಂಬರ್ 6 ರಂದು ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಕಠಿಣ ತಾಲೀಮು ನಡೆಸುತ್ತಿದೆ. ಇದರ ನಡುವೆ ವಿರಾಟ್ ಕೊಹ್ಲಿ ಅವರು ಗಾಯಕ್ಕೆ ತುತ್ತಾಗಿರುವ ರೀತಿ ಕಾಣುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಅವರ ಮೊಣಕಾಲಿಗೆ ಸಹಾಯಕ ಸಿಬ್ಬಂದಿಯೊಬ್ಬರು ಬ್ಯಾಂಡೇಜ್ ಸುತ್ತುತ್ತಿರುವುದು ಕಂಡು ಬಂದಿದೆ. ಈ ವಿಡಿಯೊ ನೋಡಿದ ಅಭಿಮಾನಿಗಳು ವಿರಾಟ್ ಕೊಹ್ಲಿಗೆ ಗಾಯವಾಗಿರಬಹುದೆ? ಎಂದು ಅಂದಾಜಿಸಿದ್ದಾರೆ. ಆದರೆ, ವಿರಾಟ್ ಕೊಹ್ಲಿ ತಮ್ಮ ಮೊಣಕಾಲಿಗೆ ಗಾಯವಾಗಿದೆಯೇ? ಅಥವಾ ಏಕೆ ಅವರು ತಮ್ಮ ಕಾಲಿಗೆ ಬ್ಯಾಂಡೇಜ್ ಸುತ್ತುತ್ತಿದ್ದಾರೆಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ತಕ ಸಿಡಿಸಿದ್ದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಕೊನೆಯ ಬಾರಿ ವೆಸ್ಟ್ ಇಂಡೀಸ್ ವಿರುದ್ದ ಕೊನೆಯ ಟೆಸ್ಟ್ ಶತಕವನ್ನು ಸಿಡಿಸಿದ್ದರು. ಕಳೆದ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ತವರು ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಅದರಂತೆ ಪರ್ತ್ ಟೆಸ್ಟ್‌ನ ಪ್ರಥಮ ಇನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ, ನಂತರ ದ್ವಿತೀಯ ಇನಿಂಗ್ಸ್‌ನಲ್ಲಿ ಮನಮೋಹಕ ಬ್ಯಾಟಿಂಗ್ ಮೂಲಕ ತಮ್ಮ 30ನೇ ಟೆಸ್ಟ್ ಶತಕವನ್ನು ಬಾರಿಸಿದ್ದರು. ಇದರೊಂದಿಗೆ ಅಡಿಲೇಡ್ ಟೆಸ್ಟ್‌ಗೂ ಮುನ್ನ ಅವರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ.
ವಿರಾಟ್ ಕೊಹ್ಲಿ ಇದೀಗ ಗಾಯಕ್ಕೆ ತುತ್ತಾಗಿದ್ದರೆ, ಟೀಮ್ ಇಂಡಿಯಾಗೆ ಬಾರಿ ಹಿನ್ನಡೆಯಾಗಲಿದೆ. ಏಕೆಂದರೆ ವಿರಾಟ್ ಕೊಹ್ಲಿ ಅಡಿಲೇಡ್‌ನಲ್ಲಿ ಉತ್ತಮ ಟೆಸ್ಟ್ ದಾಖಲೆಯನ್ನು ಹೊಂದಿದ್ದಾರೆ. ಕೊಹ್ಲಿ ಅಲಭ್ಯರಾದರೆ, ಇದು ತಂಡದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಅಡಿಲೇಡ್ ಟೆಸ್ಟ್ ಪಿಂಕ್ ಬಾಲ್‌ನಲ್ಲಿ ಆಡುವುದದಿಂದ ಇಲ್ಲಿ ಬ್ಯಾಟ್ ಮಾಡುವುದು ಸವಾಲುದಾಯಕವಾಗಿದೆ. ಒಂದು ವೇಳೆ ವಿರಾಟ್ ಕೊಹ್ಲಿಯನ್ನು ಕಳೆದುಕೊಂಡರೆ, ಇದು ಪ್ರವಾಸಿ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಭಾರಿ ಹಿನ್ನಡೆಯನ್ನು ತಂದೊಡ್ಡಬಹುದು.