Wednesday, 4th December 2024

Balaramana Dinagalu Movie: ಟೈಗರ್ ವಿನೋದ್ ಪ್ರಭಾಕರ್ ‘ಬಲರಾಮನ ದಿನಗಳು’ ಸಿನಿಮಾದ ಫಸ್ಟ್ ಲುಕ್ ರಿಲೀಸ್‌

Balaramana Dinagalu Movie

ಬೆಂಗಳೂರು: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ ʼಆ ದಿನಗಳುʼ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ (Tiger Vinod Prabhakar) ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ ʼಬಲರಾಮನ ದಿನಗಳುʼ (Balaramana Dinagalu Movie). ಡಿಸೆಂಬರ್ 3 ವಿನೋದ್ ಪ್ರಭಾಕರ್ ‌ಅವರ ಹುಟ್ಟುಹಬ್ಬ. ಹಾಗಾಗಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಇದು 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಆ ಕಾಲಮಾನದ ಗೆಟಪ್‌ನಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ. ಟೈಗರ್ ಅವರ ಈ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ʼಅಟ್ಟಕತ್ತಿʼ, ʼಕಾಲʼ, ʼಕಬಾಲಿʼ, ʼಭೈರವʼ, ʼದಸರಾʼ, ʼಕಲ್ಕಿʼ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ. ಈಗಾಗಲೇ ಸಂಗೀತ ನಿರ್ದೇಶನಕ್ಕೆ ಸಂಬಂಧಿಸಿದ ಕೆಲಸಗಳು ಆರಂಭವಾಗಿದೆ.

ಈ ಸುದ್ದಿಯನ್ನೂ ಓದಿ | Puttanna Kanagal Birthday: ನಿರ್ಮಾಪಕ ಅಪ್ಪನಂತಿದ್ದರೆ, ನಿರ್ದೇಶಕ ಅಮ್ಮನಿದ್ದಂತೆ ಎಂದ ತಾರಾ

ಬಹು ನಿರೀಕ್ಷಿತ ʼಬಲರಾಮನ ದಿನಗಳುʼ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.