Friday, 27th December 2024

Good News: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಡಿ.20ರವರೆಗೆ ವಿಸ್ತರಣೆ

students

ಬೆಂಗಳೂರು: ವಿದ್ಯಾರ್ಥಿಗಳಿಗೆ (students) ಸಿಹಿಸುದ್ದಿ (good news) ಇದೆ. 2024-25ರ ಸಾಲಿಗೆ ವಿದ್ಯಾರ್ಥಿ ವೇತನ (Scholarship) ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಸರ್ಕಾಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯಿತಿಗೆ ಇದು ಅನ್ವಯಿಸುತ್ತದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KKRTC Jobs: ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕೆಎಸ್‌ಆರ್‌ಟಿಸಿ ಉದ್ಯೋಗ, ಶೀಘ್ರವೇ ಅರ್ಜಿ ಸಲ್ಲಿಸಿ