ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ (KEA Recruitment) ಆರಂಭಿಸಿದೆ. ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಿದೆ. ಈ ಮೂಲಕ ಸರ್ಕಾರಿ ಉದ್ಯೋಗಾಸಕ್ತರಿಗೆ (Government jobs) ಸಿಹಿ ಸುದ್ದಿ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA) ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಸೇರಿ ಒಟ್ಟು ಒಟ್ಟು 28 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಹಂಬಲವುಳ್ಳವರು ಕೂಡಲೇ ಇಲ್ಲಿ ನೀಡಲಾಗಿರುವ ಮಾಹಿತಿ ಗಮನಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೆಇಎ ಅಧಿಸೂಚನೆ ತಿಳಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 5 ಕಡೆಯ ದಿನಾಂಕ. ಮಾಸಿಕ ವೇತನ, ವಿದ್ಯಾರ್ಹತೆ ಇನ್ನಿತರ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು: ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್
ಒಟ್ಟು ಹುದ್ದೆ: 28
ವಯಸ್ಸಿನ ಮಿತಿ: ಗರಿಷ್ಠ 35
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಕೆ ಕೊನೆ ದಿನ: ಜನವರಿ 5
ಮಾಸಿಕ ವೇತನ: ನಿಯಮಾನುಸಾರ
ಒಟ್ಟು 28 ಹುದ್ದೆಗಳಲ್ಲಿ ಸೀನಿಯರ್ ಪ್ರೋಗ್ರಾಮರ್ ಮತ್ತು ಜೂನಿಯರ್ ಪ್ರೋಗ್ರಾಮರ್ ತಲಾ 2 ಹುದ್ದೆಗಳು, ಜೂನಿಯರ್ ಕೌನ್ಸಲ್ ಆಪರೇಟರ್ ಮತ್ತು ಕಂಪ್ಯೂಟರ್ ಆಪರೇಟರ್ ತಲಾ 4 ಹುದ್ದೆ, ಸಹಾಯಕ 3, ಕಿರಿಯ ಸಹಾಯಕ 8 ಹಾಗೂ ಡೇಟಾ ಎಂಟ್ರಿ ಅಸಿಸ್ಟೆಂಟ್/ ಟೈಪಿಸ್ಟ್ ಹುದ್ದೆಗಳು 5 ಖಾಲಿ ಇವೆ.
ಅಭ್ಯರ್ಥಿಗಳ ವಿದ್ಯಾರ್ಹತೆ ವಿವರ: ಕೆಇಎ ನೀಡಿರುವ ಉದ್ಯೋಗ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಅಸಿಸ್ಟೆಂಟ್/ ಟೈಪಿಸ್ಟ್ ಹುದ್ದೆಗೆ 12ನೇ ತರಗತಿ ಓದಿದವರು ಅರ್ಜಿ ಸಲ್ಲಿಸಬಹುದು. ಉಳಿದ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್/ ಇನ್ಫರ್ಮೇಶನ್ ಸೈನ್ಸ್/ ಡಿಸ್ಪ್ಲೇಸ್ & ಕಮ್ಯುನಿಕೇಶನ್ನಲ್ಲಿ ಪದವಿ ಮಾಡಿರಬೇಕು. ಬಿಸಿಎ, ಕಂಪ್ಯೂಟರ್ ಸೈನ್ಸ್ನಲ್ಲಿ ಬಿ.ಎಸ್.ಸಿ, ಕಾನೂನು ಪದವಿ ಪೂರ್ಣಗೊಳಿಸಿರಬೇಕು. ಆಯಾ ಹುದ್ದೆಗೆ ಅರ್ಹವಾದ ಶೈಕ್ಷಣಿಕ ಅರ್ಹತೆ ನೋಡಿಕೊಂಡು ಅರ್ಜಿ ಸಲ್ಲಿಸಬೇಕು.
ವಯಸ್ಸಿನ ಮಿತಿ ಎಷ್ಟಿರಬೇಕು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿರುವಂತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ಇದೇ ವರ್ಷ 2024 ಏಪ್ರಿಲ್ 23ಕ್ಕೆ ಸರಿಯಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ದಾಟಿರಬಾರದು ಎಂದು ತಿಳಿಸಿದೆ. ಜಾತಿ ಮೀಸಲಾತಿ ಆಧಾರದಲ್ಲಿ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ ಎಂದು ಕೆಇಎ ತಿಳಿಸಿದೆ.
ಅರ್ಜಿ ಶುಲ್ಕದ ಮಾಹಿತಿ
ಕೆಇಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ಪೈಕಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ನೇಮಕಾತಿ ರೂ.250, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ/ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ., ಸಾಮಾನ್ಯ/ಒಬಿಸಿ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿ ಶುಲ್ಕ ನಿಗದಿ ಆಗಿದ್ದು, ಈ ಹಣವನ್ನು ನೀವು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಪಾವತಿಸಬೇಕು.
ಆಯ್ಕೆ ಹೇಗೆ ನಡೆಯಲಿದೆ?
ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಾಧಿಕಾರವೇ ಲಿಖಿತ ಪರೀಕ್ಷೆ ನಡೆಸುತ್ತದೆ. ಅಲ್ಲಿ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳುತ್ತದೆ. ಕರ್ನಾಟಕದಲ್ಲಿಯೇ ಅವರಿಗೆ ಪೋಸ್ಟಿಂಗ್ ನೀಡಲಾಗುತ್ತದೆ.
ಮಾಸಿಕ ವೇತನ ಎಷ್ಟು?
ವಿಭಾಗವಾರು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕನಿಷ್ಠ 21,400 ರೂಪಾಯಿ ಹಾಗೂ ಗರಿಷ್ಠ 97,100 ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು, ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಈ https://cetonline.karnataka.gov.in/kea/ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ: KEA Exam: VAO, GTTC ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ