ಬೆಂಗಳೂರು: ಪದವಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (General Insurance Corporation of India) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 110 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಬರ್ತಿ ಮಾಡಲು ಅದಿಸೂಚನೆ ಪ್ರಕಟಿಸಲಾಗಿದೆ (GIC India Recruitment 2024-2025). ಕಂಪೆನಿಯ ಕೇಂದ್ರ ಕಚೇರಿ ಮುಂಬೈ ಮತ್ತು ದೇಶಾದ್ಯಂತ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಡಿ. 19 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಈ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಪೂರೈಸಿರಬೇಕು. ಪದವಿಯಲ್ಲಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಶೇ. 66 ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ. 55ರಷ್ಟು ಅಂಕ ಪಡೆದಿರಬೇಕು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಸಲ್ಲಿಸಬೇಕಾಗಿಲ್ಲ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ, ಗ್ರೂಪ್ ಡಿಸ್ಕಷನ್, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆ 2025ರ ಜ. 1ರಂದು ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಪರೀಕ್ಷೆಗಿಂತ 7 ದಿನ ಮೊದಲ ಹಾಲ್ ಟಿಕೆಟ್ ದೊರೆಯಲಿದೆ. ರಾಜ್ಯದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಆಯ್ಕೆಯಾದವರಿಗೆ 50,925 ರೂ. – 96,765 ರೂ. ಮಾಸಿಕ ವೇತನ ದೊರೆಯಲಿದೆ.
GIC India Recruitment 2024-2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsonline.ibps.in/gicionov24/) - ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿಗೆ ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ವಿಳಾಸ: gicre.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್‌ನಲ್ಲಿದೆ 723 ಹುದ್ದೆ; ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಿ