Monday, 23rd December 2024

Viral News: ಚಲಿಸುವ ಕಾರಿನ ಮೇಲೆ ನಾಯಿ ಮರಿಗಳನ್ನು ಕೂರಿಸಿ ಹುಚ್ಚಾಟ; ಗುರುತು ಸಿಗದಂತೆ ತಲೆ ಬೋಳಿಸಿಕೊಂಡಿದ್ದವ ಅರೆಸ್ಟ್!

ಬೆಂಗಳೂರು: ಕಾರು ಚಾಲಕನೊಬ್ಬ ಮೂರು ನಾಯಿ ಮರಿಗಳನ್ನು ಕಾರಿನ ರೂಫ್ ಮೇಲೆ ಕೂರಿಸಿಕೊಂಡು ಚಾಲನೆ ಮಾಡುವ ಮೂಲಕ ಹುಚ್ಚಾಟ ಮೆರೆದಿರುವುದು ರಾಜಧಾನಿಯಲ್ಲಿ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಈ ಹುಚ್ಚಾಟ ಪ್ರಶ್ನಿಸಿದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಲೇ ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಿಂದ ಆರೋಪಿ ತಲೆ ಬೋಳಿಸಿಕೊಂಡಿದ್ದ. ಆದರೂ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಚಾಲಕನನ್ನು ಹರೀಶ್ (36) ಎಂದು ಗುರುತಿಸಲಾಗಿದೆ. ಕಲ್ಯಾಣ ನಗರ ಸಮೀಪ ನಾಯಿ ಮರಿಗಳನ್ನು ಕಾರಿನ ಮೇಲೆ ಕೂರಿದಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ್ದ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಆಗ ಆರೋಪಿ ಹರೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಹೀಗಾಗಿ ಈ ವಿಡಿಯೋ ವೈರಲ್ ಆಗುತ್ತಲೇ ಕಾರು ಚಾಲಕನಿಗೆ ಬೆಂಗಳೂರು ಪೊಲೀಸರು ತಕ್ಕಶಾಸ್ತಿ ಮಾಡಿದ್ದಾರೆ.

ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ನಾಯಿ ಮರಿಗಳನ್ನು ಕಾರಿನ ಮೇಲೆ ಕೂರಿಸಿ ಜೋರಾಗಿ ಮ್ಯೂಸಿಕ್ ಹಾಕಿಕೊಂಡು ಚಾಲಕ ಕಾರು ಚಲಾಯಿಸಿದ್ದಾನೆ. ಇದನ್ನು ಪ್ರಶ್ನಿಸಿದವರನ್ನೇ ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಆರೋಪಿ ಚಾಲಕ ಯಾವುದೇ ಸುರಕ್ಷತೆ ಇಲ್ಲದೆ ನಾಯಿಗಳನ್ನು ಟಾಪ್ ಮೇಲೆ ಕೂರಿಸಿದ್ದ ವಾಹನದಟ್ಟಣೆಯ ರಸ್ತೆಯಲ್ಲಿ ಕಾರು ಚಾಲನೆ ಮಾಡಿದ್ದ. ಮೂರು ನಾಯಿಗಳನ್ನು ಕೂರಿಸಿಕೊಂಡು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ್ದನ್ನು ಕೇಳಲು ಹೋದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಆರೋಪಿ ಚಾಲಕನನ್ನು 36 ವರ್ಷದ ಹರೀಶ್ ಎಂದು ಗುರುತಿಸಲಾಗಿದ್ದು, ಕಲ್ಯಾಣ ನಗರ ಸಮೀಪ ಈ ರೀತಿ ನಾಯಿಗಳನ್ನು ಕೂರಿಸಿಕೊಂಡು ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಆರೋಪಿ ಹರೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕೊನೆಗೆ ಈ ವಿಚಾರ ಬಾಣಸವಾಡಿ ಪೊಲೀಸರ ಗಮನಕ್ಕೆ ಬಂದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಹಿರಿಯ ಅಧಿಕಾರಿಗಳ ಸೂಚನೆಯಂತೆ 36 ವರ್ಷದ ಆರೋಪಿ ಹರೀಶ್​ನನ್ನು ಬಂಧಿಸಿದ್ದಾರೆ.

ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಿಂದ ಆರೋಪಿ ತಲೆ ಬೋಳಿಸಿಕೊಂಡಿದ್ದ. ಆದರೆ ಆತನ ಕಾರು ನಂಬರ್ ಮೂಲಕ ಪೊಲೀಸರು ಆತನ ಮನೆ ಪತ್ತೆ ಮಾಡಿ ಬಂಧಿಸಿದ್ದಾರೆ. ಪ್ರಸ್ತುತ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹರೀಶ್ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾರಿನ ಮೇಲೆ PRESS ಸ್ಟಿಕ್ಕರ್

ಇನ್ನು ಆರೋಪಿ ಹರೀಶ್ ತನ್ನ ಕಾರಿನ ಮೇಲೆ ‘ಹರಿ ಲೈಕ್ಸ್ ರಿಸ್ಕ್’ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಕಲಿ ‘ಪ್ರೆಸ್’ ಸ್ಟಿಕ್ಕರ್ ಅನ್ನು ಹೊಂದಿದ್ದ. ಆದರೆ ಪೊಲೀಸರ ವಿಚಾರಣೆ ವೇಳೆ ತಾನು ಹೇರ್ ಸ್ಟೈಲಿಸ್ಟ್ ಎಂದು ಬಾಯಿ ಬಿಟ್ಟಿದ್ದಾನೆ. ಪ್ರೆಸ್ ಸ್ಟಿಕ್ಕರ್ ಬಗ್ಗೆ ವಿಚಾರಿಸಿದಾಗ ತಾನು ಮೊದಲು ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದೆ. ಹೀಗಾಗಿ ಕಾರಿನ ಮೇಲೆ ಈ ಸ್ಟಿಕ್ಕರ್ ಹಾಕಿದ್ದೆ. ಬಳಿಕ ಆ ಕೆಲಸ ತೊರೆದು ಸಲೂನ್ ನಲ್ಲಿ ಹೇರ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದೆ. ಆದರೆ ಈಗ ನಿರುದ್ಯೋಗಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಆತ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೀಗೆ ಕಾರಿನ ಮೇಲೆ ಪ್ರೆಸ್ ಸ್ಟಿಕ್ಕರ್ ಹಾಕಿದ್ದ ಎಂದು ಅಧಿಕಾರಿಗಳು‌ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Mamta Kulkarni: 24 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ಖ್ಯಾತ ನಟಿ ಮಮತಾ ಕುಲಕರ್ಣಿ ; ಡ್ರಗ್ಸ್‌ ದಂಧೆ ಪ್ರಕರಣದಲ್ಲಿ ಬಿಗ್‌ ರಿಲೀಫ್!‌