ಚಿಕ್ಕಬಳ್ಳಾಪುರ : ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೆöÊರ್ಯ ತುಂಬಿ ಅವರ ಬಾಳಿಗೆ ಬೆಳಕಾಗ ಬೇಕಾದ ಸರ್ಕಾರಿ ಬಾಲಕಿಯರ ಮಂದಿರದ ಸಿಬ್ಬಂದಿ ಅವರಿಗೆ ಹಿಂಸೆ ನೀಡಿದ್ದಲ್ಲದೆ,ಮೂಲಭೂತ ಸೌಲಭ್ಯಗಳನ್ನು ಕೂಡ ಒದಗಿಸದೆ,ಕೇಳಿದವರ ಮೇಲೆ ದರ್ಪ ದೌರ್ಜನ್ಯ ತೋರಿ ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಬಾಲ ಮಂದಿರದ ಅಧಿಕ್ಷಕಿ ಮತ್ತು ಸಹಾಯಕಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಕಾರಣ ಜಿಲ್ಲಾಧಿಕಾರಿಗಳ ನಿರ್ದೇಶದಂತೆ ಸೇವೆಯಿಂದ ವಜಾಗೊಳಿಸಲಾಗಿದೆ.
ನಗರದ ಬಿಬಿ ರಸ್ತೆಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಸರ್ಕಾರಿ ಬಾಲಕಿಯರ ಮಂದಿರದಲ್ಲಿಯೇ ಇಂತಹ ಅಮಾನವೀಯ ಕೃತ್ಯ ನಡೆದಿದೆ.
ಸರ್ಕಾರಿ ಬಾಲಕಿಯರ ಮಂದಿರ ನೊಂದ ಸಂತ್ರಸ್ಥ ಬಾಲಕಿಯರಿಗೆ ಆಸರೆಯಾಗುವ ಬದಲು ನರಕವಾಗಿದೆ. ಬಾಲಮಂದಿರಕ್ಕೆ ನೊಂದು ಬರುವ ಬಾಲಕಿಯರಿಗೆ ಧೈರ್ಯ ಹೇಳುವುದರ ಬದಲು ಬಾಲಕಿಯರಿಗೆ ಸಕಾಲಕ್ಕೆ ಅನ್ನ, ಆಹಾರ ನೀಡದೆ ದೈಹಿಕ, ಮಾನಸಿಕ ಕಿರುಕುಳನೀಡಿ, ವೇಶ್ಯಾವಾಟಿಕೆಗೆ ಸಹಕರಿಸದ ಕಾರಣ ಕಟ್ಟಿ ಹಾಕುವುದು, ಕೂಡಿ ಹಾಕಿ ಬರೆ ಹಾಕಿರುವ ಪ್ರಕರಣಗಳು ಕೂಡ ಬಯಲಾಗಿವೆ.
ಈ ಕೃತ್ಯಗಳಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದ ಅಧೀಕ್ಷಕಿ ಮಮತಾ ಸ್ವತಃ ಭಾಗಿಯಾಗಿದ್ದು ಬಾಲಕಿಯರಿಗೆ ಸಾಂತ್ವನ ಹೆಳುವುದರ ಬದಲು ಕ್ಷುಲ್ಲಕ ಕಾರಣಕ್ಕೆ ಬಾಲಕಿಯರನ್ನು ಕಿಟಕಿ ಸರಳು, ಕಂಬಗಳಿಗೆ ಕಟ್ಟಿಹಾಕಿ, ರೂಮ್‌ಗಳಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಬಗ್ಗೆ ನೊಂದ ಬಾಲಕಿಯರು ಕಾನೂನು ಸೇವಾ ಆಯೋಗದ ಜಿಲ್ಲಾ ಸಮಿತಿಯ ಎದುರು ಅವಲತ್ತುಕೊಂಡಿದ್ದರು.
ಈ ಸಂಬAಧ ಮಾಹಿತಿ ಪಡೆದ ಚಿಕ್ಕಬಳ್ಳಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಬಾಲಕಿಯರ ಮಂದಿರಕ್ಕೆ ಭೇಟಿ ನೀಡಿ ದೂರು ಆಲಿಸಿ ತನಿಖೆಗೆ ಸೂಚಿಸಿದರು.ಆಗ ಚಿಕ್ಕಬಳ್ಳಾಪುರದ ಸರ್ಕಾರಿ ಬಾಲಕಿಯರ ಮಂದಿರ ಕರ್ಮಕಾಂಡ ಬಯಲಾಗಿವೆ.
ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿಯಾಗಿರುವ ಮಮತಾ ಹಾಗೂ ಬಾಲಮಂದಿರದ ಸಹಾಯಕಿ ಸರಸ್ವತಮ್ಮ ಬಾಲಕಿಯರಿಗೆ ಚಿತ್ರಹಿಂಸೆ ನೀಡಿ, ದೈಹಿಕ ಹಲ್ಲೆ ಮಾಡಿರುವುದು ತನಿಖೆಯಲ್ಲಿ ಬಯಲಾ ಗಿದೆ. ಇದರಿಂದ ಸ್ವತಃ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಪಿ.ಎನ್ ರವೀಂದ್ರರವರ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನವತಾಬಿ, ಚಿಕ್ಕಬಳ್ಳಾಪುರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹೀಗಾಗಿ ಮಹಿಳಾ ಠಾಣೆಯ ಪೊಲೀಸರು ಮಮತಾ ಹಾಗೂ ಸರಸ್ವತಿ ವಿರುದ್ಧ ಮಕ್ಕಳ ಹಕ್ಕುಗಳ ಉಲ್ಲಂಘನೆ ಕಾಯ್ದೆ, ದೈಹಿಕ ಹಲ್ಲೆ, ಮಾನಸಿಕ ಹಿಂಸೆ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇನ್ನೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಮಮತಾ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.