Tuesday, 7th January 2025

WTC Standings: ಪಿಂಕ್‌ ಟೆಸ್ಟ್‌ ಸೋಲಿನ ಬೆನ್ನಲ್ಲೆ ಮೂರನೇ ಸ್ಥಾನಕ್ಕೆ ಕುಸಿದ ಭಾರತ!

WTC Standings: India slip to 3rd, New Zealand out of race in World Test Championship standings

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಎರಡನೇ ಹಾಗೂ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೆ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ (WTC Standings) ಮೂರನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಇಂಗ್ಲೆಂಡ್‌ ಎದುರು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ನ್ಯೂಜಿಲೆಂಡ್‌ ತಂಡ ಫೈನಲ್‌ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿದೆ.

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಎರಡನೇ ಹಾಗೂ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ 10 ವಿಕೆಟ್‌ಗಳಿಂದ ಗೆಲುವು ಪಡೆಯಿತು. ಟ್ರಾವಿಸ್‌ ಹೆಡ್‌ ಶತಕ ಹಾಗೂ ಮಿಚೆಲ್‌ ಸ್ಟಾರ್ಕ್‌ ಮತ್ತು ಪ್ಯಾಟ್‌ ಕಮಿನ್ಸ್‌ ಅವರ ಐದು ವಿಕೆಟ್‌ಗಳ ಸಾಧನೆಯ ನೆರವಿನಿಂದ ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್‌ ಗೆದ್ದು, ಟೆಸ್ಟ್‌ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

IND vs AUS: ಟೀಂ ಇಂಡಿಯಾ ವಿರುದ್ಧ ಸೇಡು ತೀರಿಸಿಕೊಂಡ ಆಸ್ಟ್ರೇಲಿಯಾ;‌ 10 ವಿಕೆಟ್‌ಗಳ ಭರ್ಜರಿ ಜಯ

ಪಿಂಕ್‌ ಬಾಲ್‌ ಟೆಸ್ಟ್‌ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ 60.71ರ ಗೆಲುವಿನ ಸರಾಸರಿ ಮೂಲಕ ಟೆಸ್ಟ್‌ ಚಾಂಪಿಯನ್‌ಷಿಪ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನಕ್ಕೇರಿತು. ಇದಕ್ಕೂ ಮುನ್ನ ಪರ್ತ್‌ ಟೆಸ್ಟ್‌ನಲ್ಲಿ ಸೋಲು ಅನುಭವಿಸಿದ ಬಳಿಕ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಫೈನಲ್‌ಗೆ ಭಾರತ ತಂಡ ಅರ್ಹತೆ ಪಡೆಯಬೇಕೆಂದರೆ, ಮುಂದಿನ ಮೂರು ಪಂದ್ಯಗಳನ್ನು ಗೆಲ್ಲಬೇಕು ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ ತಂಡ ಗೆಲ್ಲಬೇಕಾಗುತ್ತದೆ.

ಇಂಗ್ಲೆಂಡ್‌ ಎದುರು ಟೆಸ್ಟ್‌ ಸರಣಿಯನ್ನು ಸೋತಿರುವ ನ್ಯೂಜಿಲೆಂಡ್‌ ತಂಡ ಪಾಯಿಂಟ್ಸ್‌ ಟೇಬಲ್‌ನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಆದರೆ, ಇಂಗ್ಲೆಂಡ್‌ ತಂಡ 45.24ರ ಸರಾಸರಿಯನ್ನು ಉತ್ತಮಪಡಿಸಿಕೊಂಡಿದೆ.

ಆಸ್ಟ್ರೇಲಿಯಾಗೆ 10 ವಿಕೆಟ್‌ಗಳ ಜಯ

ಇನು ಅಡಿಲೇಡ್‌ ಟೆಸ್ಟ್‌ ಪಂದ್ಯದ ಬಗ್ಗೆ ಮಾತನಾಡುವುದಾದರೆ ಭಾರತ ತಂಡ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿತು. ಪ್ರಥಮ ಇನಿಂಗ್ಸ್‌ನಲ್ಲಿ ಕೇವಲ 180 ರನ್‌ಗಳಿಗೆ ಆಲ್‌ಔಟ್‌ ಆಗಿದ್ದರೆ, ದ್ವಿತೀಯ ಇನಿಂಗ್ಸ್‌ನಲ್ಲಿ 175 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಆದರೆ, ಪ್ರಥಮ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ, ಟ್ರಾವಿಸ್‌ ಹೆಡ್‌ (140) ಶತಕದ ಬಲದಿಂದ ಪ್ರಥಮ ಇನಿಂಗ್ಸ್‌ನಲ್ಲಿ 337 ರನ್‌ಗಳನ್ನು ಕಲೆ ಹಾಕಿತ್ತು. ಇದರ ಫಲವಾಗಿ ಆಸೀಸ್‌ ಪ್ರಥಮ ಇನಿಂಗ್ಸ್‌ನಲ್ಲಿ 157 ರನ್‌ಗಳ ಮುನ್ನಡೆಯನ್ನು ಪಡೆದಿತ್ತು. ಇದರಿಂದ ಆಸ್ಟ್ರೇಲಿಯಾ ತಂಡ ದ್ವಿತೀಯ ಇನಿಂಗ್ಸ್‌ನಲ್ಲಿ ಗೆಲ್ಲಲು ಕೇವಲ 19 ರನ್‌ಗಳ ಅಗತ್ಯವಿತ್ತು. ಆ ಮೂಲಕ ಇನಿಂಗ್ಸ್‌ ಆರಂಭಿಸಿದ ನೇಥನ್‌ ಮೆಕ್‌ಸ್ವೀನಿ ಹಾಗೂ ಉಸ್ಮಾನ್‌ ಖವಾಜ ವಿಕೆಟ್‌ ನೀಡದ ಆಸ್ಟ್ರೇಲಿಯಾ ತಂಡವನ್ನು ಗೆಲ್ಲಿಸಿದರು.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದ ಬ್ರಿಸ್ಬೇನ್‌ನಲ್ಲಿ ಡಿಸೆಂಬರ್‌ 14 ರಂದು ಆರಂಭವಾಗಲಿದೆ.

ಟೆಸ್ಟ್‌ ಚಾಂಪಿಯನ್‌ಷಿಪ್‌ ಪಾಯಿಂಟ್ಸ್‌ ಟೇಬಲ್‌