Wednesday, 25th December 2024

Maternal Deaths: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ತನಿಖೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

vidhana_soudha

ಬೆಂಗಳೂರು: ಬಳ್ಳಾರಿಯ (Bellary news) ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವು (Maternal deaths) ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಐಎಎಸ್ ಅಧಿಕಾರಿ ಎಂ.ಕನಗವಲ್ಲಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ (Karnataka Government) ಆದೇಶಿಸಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತಂತೆ ಹಾಗೂ ರಾಜ್ಯದಲ್ಲಿ ಇದೇ ತರಹದ ಪ್ರಕರಣಗಳು ಮರುಕಳಿಸದಂತೆ ಮೂಲ ವ್ಯವಸ್ಥೆ ಸುಧಾರಣೆಗಳನ್ನು ತರಲು (Basic System reforms) ತರಲು ಸೂಕ್ತ ಶಿಫಾರಸ್ಸಿನೊಂದಿಗೆ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದಿದ್ದಾರೆ.

ಕೆಎಸ್ಎಂಎಸ್‌ಸಿಎಲ್ ಅವರು ಟೆಂಡರ್ ಮೂಲಕ ಔಷಧಿಗಳ ಖರೀದಿ ಮತ್ತು ಎಂಪ್ಯಾನಲ್ ಲ್ಯಾಬೋರೇಟರಿಗಳಿಗೆ ಔಷಧಗಳ ಮಾದರಿಗಳನ್ನು ಒಳಪಡಿಸುವಲ್ಲಿ ಆಗಿರುವ ನಿಯಮಗಳ ಉಲ್ಲಂಘನೆಗಳ ಬಗ್ಗೆ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಎಸಗಿದ ಅಧಿಕಾರಿಗಳ ಮೇಲೆ ಜವಾಬ್ದಾರಿಗಳನ್ನು ನಿಗದಿ ಮಾಡುವ ಬಗ್ಗೆ ಮತ್ತು ಕೆಎಸ್‌ಎಂಎಸ್‌ಸಿಎಲ್‌ನಲ್ಲಿ ಪ್ರಸ್ತುತ ನಡಾವಳಿ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವ ಸಂಬಂಧ IAS ಅಧಿಕಾರಿ ನೇತೃತ್ವದಲ್ಲಿ ಒಂದು ಪರಿಶೀಲನಾ ತಂಡ (verification team) ರಚಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿನ ಸಮಿತಿ ಸಭಾ ನಡವಳಿಯಲ್ಲಿನ ತೀರ್ಮಾನದಂತೆ IAS ಅಧಿಕಾರಿ ನೇತೃತ್ವದಲ್ಲಿ ಒಂದು ಪರಿಶೀಲನಾ ತಂಡ (verification team) ವನ್ನು ರಚಿಸಲು ನಿರ್ಧರಿಸಿ ಆದೇಶಿಸಿದೆ.

ತಂಡದಲ್ಲಿ ಇರುವವರು:

ಎಂ.ಕನಗವಲ್ಲಿ, ಐಎಎಸ್ ಅಧಿಕಾರಿ
ವೆಂಕಟೇಶ್, ಸಹಾಯಕ ಔಷಧ ನಿಯಂತ್ರಕರು
ಡಾ.ಅಸೀಮಾ ಬಾನು, ಮೈಕ್ರೋಬಯಾಲಜಿಸ್ಟ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಉಪ ಕುಲಸಚಿವರಿಂದ ನಾಮನಿರ್ದೇಶಿತ ಒಬ್ಬ ಹಿರಿಯ ಫಾರ್ಮಾಕಾಲಜಿ ಪ್ರಾಧ್ಯಾಪಕರು

ಈ ಪರಿಶೀಲನಾ ತಂಡವು (verification team) ವಿವರವಾದ ವರದಿಯನ್ನು ಕಡ್ಡಾಯವಾಗಿ ಐದು (05) ದಿನಗಳೊಳಗಾಗಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿನ ಸಮಿತಿಯ ಅಧ್ಯಕ್ಷರಿಗೆ ಸಲ್ಲಿಸಬೇಕಿದೆ.

ಇದನ್ನೂ ಓದಿ: CM Siddaramaiah: ಬಾಣಂತಿಯರ ಸಾವಿನ ತನಿಖೆಗೆ ತಜ್ಞರ ಸಮಿತಿ ನೇಮಕ