Saturday, 21st September 2024

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಜಯಭೇರಿ

ಜೈಪುರ : ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ 1,718 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ರಾಜಸ್ಥಾನದ ಒಟ್ಟು 4,371 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್ 1,718 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ 56, ಪಕ್ಷೇತರ 420 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನು ಜಿಲ್ಲಾ ಪರಿಷತ್ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.