Friday, 27th December 2024

KSRTC: ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಬೇಡಿಕೆ ಈಡೇರಿಸಲು ಅನ್ಬುಕುಮಾರ್‌ಗೆ ಮನವಿ

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ  ಹೆಚ್ಚುವರಿ ಪಿಂಚಣಿ ಬಿಡುಗಡೆ ಸೇರಿದಂತೆ ಮನವಿ ಪತ್ರದಲ್ಲಿ ತಿಳಿಸಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ Pಕೆಎಸ್‌ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ನಿವೃತ್ತ ನೌಕರರ ಸಂಘದ ನಿಯೋಗದ ವತಿಯಿಂದ ಮನವಿ ಸಲ್ಲಿಸಲಾಯಿತು.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದ ಎಂ.ಡಿ ಅನ್ಬುಕುಮಾರ್ ಇಲಾಖೆಯ ಮಂತ್ರಿಗಳೊAದಿಗೆ ಚರ್ಚಿಸಿ ಬೇಡಿಕೆ ಈಡೇರಿಸಲು ಶೀಘ್ರವೇ ಕ್ರಮವಹಿಸಲಾಗುವುದು ಎಂದು ನಿಯೋಗದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.

ಈ ವೇಳೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ನಂಜು0ಡೇಗೌಡ, ಎನ್‌ಎಸಿ ಸಂಘಟನೆಯ ರಾಜ್ಯಾಧ್ಯಕ್ಷ ಜಿ.ಎಸ್.ಎಂ.ಸ್ವಾಮಿ, ಚಿಕ್ಕಬಳ್ಳಾಪುರ ಜಿಲ್ಲಾ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗು ನ್ಯಾಷನಲ್ ಎಜಿಕೇಷನ್ ಕಮಿಟಿ ಕರ್ನಾಟಕದ ರಾಜ್ಯ ಜಂಟಿ ಕಾರ್ಯದರ್ಶಿಯಾದ  ಮೇಲೂರು ಅಮರ್, ಜಿಲ್ಲಾಧ್ಯಕ್ಷ ಎನ್.ಬ್ರಹ್ಮಾಚಾರಿ, ಸುಬ್ಬಣ್ಣ, ಶಂಕರ್ ಕುಮಾರ್, ಡೋಲಪ್ಪ ಇನ್ನಿತರರು ಹಾಜರಿದ್ದರು.