Tuesday, 24th December 2024

SM Krishna Passed away: ಎಸ್‌ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

SM krishna

ನವದೆಹಲಿ: ಕರ್ನಾಟಕದ ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna Passed away) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: S M Krishna: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಇಂದು ಮುಂಜಾನೆ ಮೃತರಾದ ಕರ್ನಾಟಕದ ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಗೌರವಾರ್ಥ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ನಾಳೆ (ಬುಧವಾರ) ರಜೆ (Government Holiday) ಘೋಷಣೆ ಮಾಡಿದೆ.

ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ಶಾಲೆ- ಕಾಲೇಜು- ಸರ್ಕಾರಿ ಕಚೇರಿಗಳು ಕಾರ್ಯಾಚರಿಸುವುದಿಲ್ಲ. ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ.